Home namma chikmagalur chikamagalur ತಮಿಳುನಾಡು ಮೂಲದ ಖಾಸಗಿ ಬಸ್‌ ವಶ
chikamagalurHomeLatest Newsnamma chikmagalur

ತಮಿಳುನಾಡು ಮೂಲದ ಖಾಸಗಿ ಬಸ್‌ ವಶ

Share
Share

ಚಿಕ್ಕಮಗಳೂರು : ಅಂಡರ್ ವರ್ಲ್ಡ್ ಡಾನ್ ದಾವುದ್ ಇಬ್ರಾಹಿಂ ಫೋಟೋ ಮತ್ತು ಆತನನ್ನು ವೈಭವೀಕರಿಸುವ ಬರಹಗಳನ್ನು ಹೊಂದಿದ್ದ ತಮಿಳುನಾಡು ಮೂಲದ ಖಾಸಗಿ ಬಸ್ಸನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ತಡೆಹಿಡಿದಿದ್ದಾರೆ.

ನಗರದ ಎನ್.ಎಂ.ಸಿ. ಸರ್ಕಲ್ ಬಳಿ ಈ ಬಸ್ಸನ್ನು ಪತ್ತೆಹಚ್ಚಿದ ಸಂಘಟನೆಗಳು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಬಸ್ಸನ್ನು ವಶಕ್ಕೆ ಪಡೆಯುವಂತೆ ಒತ್ತಾಯಿಸಿದವು.

ಬಸ್ಸಿನ ಮೇಲೆ “ಲೈವ್ ಬೈ ಎ ಗನ್, ಡೈ ಬೈ ಎ ಗನ್, “ಕ್ರೈಮ್ ಲಾರ್ಡ್ ಕ್ರಾನಿಕಲ್ಸ್” ಮತ್ತು “ದಾವುದ್ ದಿ ರಿಯಲ್ ಡಾನ್” ಎಂಬ ವಿವಾದಾತ್ಮಕ ಸ್ಟಿಕರ್‌ಗಳನ್ನು ಅಂಟಿಸಲಾಗಿತ್ತು. ಅಷ್ಟೇ ಅಲ್ಲದೆ, ಬಸ್ಸಿನ ಹಿಂಭಾಗದಲ್ಲಿ “ಡಿ ಗ್ಯಾಂಗ್ ಆಫ್ ಮುಂಬೈ” ಹಾಗೂ “ಬಾಂಬೆ ಅಂಡರ್ ವರ್ಲ್ಡ್ ದಾವುದ್ ರಿಯಲ್ ಡಾನ್” ಎಂಬ ಬರಹಗಳನ್ನು ಬರೆಯುವ ಮೂಲಕ ಭಯೋತ್ಪಾದಕ ಹಾಗೂ ಅಪರಾಧ ಜಗತ್ತಿನ ನಾಯಕನನ್ನು ಹೀರೋನಂತೆ ಬಿಂಬಿಸಲಾಗಿತ್ತು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಸ್ಸನ್ನು ವಶಕ್ಕೆ ಪಡೆದು ಬಸವನಹಳ್ಳಿ ಪೊಲೀಸ್ ಠಾಣೆಯ ಆವರಣಕ್ಕೆ ಕೊಂಡೊಯ್ದಿದ್ದಾರೆ.

ದೇಶದ್ರೋಹಿ ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ವ್ಯಕ್ತಿಯನ್ನು ಪ್ರಚೋದನಾಕಾರಿ ರೀತಿಯಲ್ಲಿ ಪ್ರದರ್ಶಿಸಿದ ಬಸ್ಸಿನ ಮಾಲೀಕರು ಮತ್ತು ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ಸಂಘಟನೆಗಳು ಆಗ್ರಹಿಸಿವೆ.

Private bus from Tamil Nadu seized

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....