Home namma chikmagalur chikamagalur ಚೌಳಹಿರಿಯೂರು ಭಾಗದಲ್ಲಿ ಚಿರತೆ ಕಾಟ
chikamagalurHomeLatest Newsnamma chikmagalur

ಚೌಳಹಿರಿಯೂರು ಭಾಗದಲ್ಲಿ ಚಿರತೆ ಕಾಟ

Share
Share

ಕಡೂರು: ತಾಲ್ಲೂಕಿನ ಚೌಳಹಿರಿಯೂರು ಭಾಗದಲ್ಲಿ ಚಿರತೆ ಕಾಟ ಹೆಚ್ಚುತ್ತಿದ್ದು ಜನ, ಜಾನುವಾರುಗಳು ಭೀತಿಯಿಂದ ಬದುಕುವಂತಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಚೌಳಹಿರಿಯೂರು ಸೇರಿದಂತೆ ಸುತ್ತಮುತ್ತ ಇ ತಿಮ್ಮಾಪುರ, ಕುರುಬರಹಳ್ಳಿ, ತಾಂಡ್ಯ, ಮಂಜುನಾಥಪುರ ಮತ್ತಿತರ ಕಡೆ ಗ್ರಾಮದ ಹೊರವಲಯದ ಮನೆಗಳು, ತೋಟಗಳ ಆಸುಪಾಸಿನಲ್ಲಿ ನಿತ್ಯ ಚಿರತೆ ಕಾಣಿಸಿಕೊಳ್ಳುತ್ತಿದೆ ಎನ್ನುವುದು ಗ್ರಾಮಸ್ಥರಲ್ಲಿ ಚಿಂತೆ ಮೂಡಿಸಿದೆ.

ಜತೆಗೆ ಗ್ರಾಮದ ಹೊರವಲಯದ ತೋಟದ ಮನೆಯ ಸಿಸಿಟಿವಿಯಲ್ಲಿ ಚಿರತೆ ಬಂದು ಹೋಗಿರುವ ದೃಶ್ಯ ಸೆರೆಯಾಗಿದೆ. ಕುಕ್ಕಸಮುದ್ರ ಕಾವಲು, ಗಂಗನ ಹಳ್ಳಿ ಕಾವಲು, ತೆಮ್ಮೆಹಳ್ಳಿ ಕಾವಲು, ಜಮ್ಮಾಪುರ ಕಾವಲು, ವೇದಾನದಿ ದಂಡೆ, ಬನ್ನಿಹಟ್ಟಿ ಕಾವಲು ಮೊದಲಾದ ವಲಯಗಳಲ್ಲಿ ಎರಡು ಚಿರತೆಗಳು ಅಡ್ಡಾಡುತ್ತಿವೆ.

ಚೌಳಹಿರಿಯೂರು ಗ್ರಾಮದ ಗಾಡಿ ಮರುಳಸಿದ್ದಪ್ಪ ಮತ್ತು ಕೊಪ್ಪಲು ಮರುಳಸಿದ್ದಪ್ಪ ಹಾಗೂ ಯತೀಶ್ ಅವರ ಕರುಗಳನ್ನು ಹೊತ್ತೊಯ್ದಿವೆ. ತಾಂಡ್ಯದ ಚಂದ್ರನಾಯ್ಕ ಮತ್ತು ನಾಗಾನಾಯ್ಕ ಎಂಬುವರಿಗೆ ಸೇರಿದ ಮೇಕೆಗಳನ್ನು ಅವರ ಕಣ್ಣೆದುರೇ ಚಿರತೆ ಹೊತ್ತೊಯ್ದಿದೆ. ಅರಣ್ಯ ಇಲಾಖೆಯವರು ಶೀಘ್ರವಾಗಿ ಚಿರತೆ ಕಾಟದಿಂದ ಈ ಭಾಗದ ಜನರಿಗೆ ಮುಕ್ತಿ ಕೊಡಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಅಶೋಕ್ ಕುಮಾರ್ ಮತ್ತು ಕೃಷಿಕ ನಂದಿ ನಾಗರಾಜ್ ಒತ್ತಾಯಿಸಿದರು.

ವಲಯ ಅರಣ್ಯಾಧಿಕಾರಿ ಎಂ.ಆರ್.ಹರೀಶ್, ‘ಯಗಟಿ-ಚೌಳಹಿರಿಯೂರು ಭಾಗದಲ್ಲಿ ಈಗಾಗಲೇ ಬೋನು ಇರಿಸಲಾಗಿದೆ. ಆದರೆ ಈ ಪ್ರಾಣಿಗಳು ಆಹಾರ ಅರಸಿ ಒಂದೆಡೆಯಿಂದ ಮತ್ತೊಂದು ಕಡೆ ಸ್ಥಳಾಂತರವಾಗುತ್ತಲೇ ಇರುತ್ತವೆ. ಚೌಳಹಿರಿಯೂರು ಭಾಗದಲ್ಲಿ ಸಮಸ್ಯೆ ಕಂಡು ಬಂದಿರುವ ಕಡೆ ಬೋನು ಇರಿಸಿ ನಾಯಿ ಕಟ್ಟಿ ಹಾಕಿ ಸೆರೆ ಹಿಡಿಯಲು ಯತ್ನಿಸಲಾಗುವುದು.

ಸ್ವಲ್ಪ ಸೂಕ್ಷ್ಮ ತಿಳಿದರೂ ಅಥವಾ ಗೊಂದಲ ಉಂಟಾದರೂ ಅವು ತಪ್ಪಿಸಿಕೊಳ್ಳುತ್ತವೆ. ಈ ಬಗ್ಗೆ ಸಿಬ್ಬಂದಿಯನ್ನು ಕಳಿಸಿ ಪರಿಶೀಲಿಸಿ ಕ್ರಮ ವಹಿಸುವುದಾಗಿ ತಿಳಿಸಿದರು.

Leopard threat in Chaulahiriyur area

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....