Home namma chikmagalur chikamagalur ಎಸ್ಸಿ ಜಿತೇಂದ್ರ ಕುಮಾ‌ರ್ ದಯ್ಯಾ ಹೆಸರಿನಲ್ಲೇ ನಕಲಿ ಫೇಸ್‌ಬುಕ್ ಖಾತೆ
chikamagalurCrime NewsHomeLatest Newsnamma chikmagalur

ಎಸ್ಸಿ ಜಿತೇಂದ್ರ ಕುಮಾ‌ರ್ ದಯ್ಯಾ ಹೆಸರಿನಲ್ಲೇ ನಕಲಿ ಫೇಸ್‌ಬುಕ್ ಖಾತೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ರಕ್ಷಕರಿಗೇ ಈಗ ಸೈಬರ್ ಕಳ್ಳರ ಕಾಟ ಶುರುವಾಗಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಸಿ) ಜಿತೇಂದ್ರ ಕುಮಾ‌ರ್ ದಯ್ಯಾ ಅವರ ಹೆಸರಿನಲ್ಲೇ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ಸೃಷ್ಟಿಸಿದ್ದಾರೆ.

ಜಿತೇಂದ್ರ ಕುಮಾರ್ ದಯ್ಯಾ ಅವರು ಚಿಕ್ಕಮಗಳೂರು ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಈ ನಕಲಿ ಖಾತೆ ಸಕ್ರಿಯಗೊಂಡಿರುವುದು ಅಚ್ಚರಿ ಮೂಡಿಸಿದೆ. “ಐ.ಪಿ.ಎಸ್ ಜಿತೇಂದ್ರ ಕುಮಾರ್ ದಯ್ಯಾ” ಎಂಬ ಹೆಸರಿನಲ್ಲಿ ಖಾತೆ ತೆರೆದಿರುವ ಕಿಡಿಗೇಡಿ, ಇದು ಅಸಲಿ ಖಾತೆಯೆಂದೇ ಬಿಂಬಿಸಲು ಸಕಲ ತಯಾರಿ ನಡೆಸಿದ್ದಾನೆ.

ಇದರಲ್ಲಿ ಚಿಕ್ಕಮಗಳೂರು ಪೊಲೀಸ್ ಇಲಾಖೆಯ ಅಧಿಕೃತ ಚಟುವಟಿಕೆಗಳು ಹಾಗೂ ಪ್ರಮುಖ ಮಾಹಿತಿಗಳನ್ನೇ ನಿರಂತರವಾಗಿ ಪೋಸ್ಟ್ ಮಾಡುವ ಮೂಲಕ ಸಾರ್ವಜನಿಕರನ್ನು ವಂಚಿಸುವ ಮತ್ತು ನಂಬಿಸುವ ವ್ಯವಸ್ಥಿತ ಸಂಚು ರೂಪಿಸಲಾಗಿದೆ.

ಅಧಿಕಾರಿಯೊಬ್ಬರ ಹೆಸರನ್ನು ಬಳಸಿಕೊಂಡು ಇಲಾಖೆಯ ಒಳಗಿನ ಮಾಹಿತಿಯಂತೆ ಪೋಸ್ಟ್ ಮಾಡುತ್ತಿರುವುದು ಇಲಾಖೆಯ ಘನತೆಗೆ ಧಕ್ಕೆ ತರುವ ಆತಂಕವನ್ನು ಸೃಷ್ಟಿಸಿದೆ. ನಕಲಿ ಖಾತೆ ಸೃಷ್ಟಿಸಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೈಬರ್ ಕ್ರೈಂ ಪೊಲೀಸರು ಮುಂದಾಗಿದ್ದಾರೆ.

ಸಾರ್ವಜನಿಕರು ಇಂತಹ ನಕಲಿ ಖಾತೆಗಳ ಬಗ್ಗೆ ಎಚ್ಚರದಿಂದಿರಬೇಕು ಮತ್ತು ಯಾವುದೇ ವೈಯಕ್ತಿಕ ಮಾಹಿತಿ ಅಥವಾ ಹಣಕಾಸಿನ ಬೇಡಿಕೆಗಳಿಗೆ ಸ್ಪಂದಿಸಬಾರದಾಗಿದೆ.

Fake Facebook account in the name of SC Jitendra Kumar Dayya

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....