Home namma chikmagalur chikamagalur ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಜಯಂತಿ ಆಚರಣೆಗೆ ಸಿದ್ಧತೆ
chikamagalurHomeLatest Newsnamma chikmagalur

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಜಯಂತಿ ಆಚರಣೆಗೆ ಸಿದ್ಧತೆ

Share
Share

ಚಿಕ್ಕಮಗಳೂರು: ನಗರದಲ್ಲಿ ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಹಾಗೂ ಏಪ್ರಿಲ್ ೫ ರಂದು ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಣೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏಪ್ರಿಲ್ ೫ ರಂದು ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ನಗರದ ಕುವೆಂಪು ಕಲಾಮಂದಿರದಲ್ಲಿ ಆಚರಿಸಲಾಗುವುದು. ಈ ಮಹಾನ್ ನಾಯಕನ ಜೀವನ ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗುವುದು ಎಂದರು.

ಏಪ್ರಿಲ್ ೧೪ ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು. ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ರವರ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಮಾಡಲಾಗುವುದಲ್ಲದೆ, ಈ ಇಬ್ಬರು ಮಹನೀಯರ ಜಯಂತಿ ಪ್ರಯುಕ್ತ ನಗರದ ತಹಸೀಲ್ದಾರ್ ಕಚೇರಿಯಿಂದ ಕುವೆಂಪು ಕಲಾಮಂದಿರದವರೆಗೆ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸ್ವಚ್ಛತೆ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರಿಗೆ ತಿಳಿಸಿದರು.

ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರದ ಶಿಷ್ಠಾಚಾರದಂತೆ ಕಾರ್ಯಕ್ರಮಗಳನ್ನು ಆಯೋಜಿಸಿ, ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಯುವಜನತೆಗೆ ಮಹನೀಯರ ಆದರ್ಶಗಳು, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳ ಕುರಿತು ಅರಿವು ಮೂಡಿಸಲು ಉಪನ್ಯಾಸಗಳು, ಪ್ರಬಂಧ, ಭಾಷಣ ಸ್ಪರ್ಧೆಗಳನ್ನು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಯೋಜಿಸುವಂತೆ ಸಭೆಯಲ್ಲಿ ಭಾಗವಹಿಸಿದವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಹನೀಯರ ಜಯಂತಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗದೆ, ಎಲ್ಲ ಜನಾಂಗದವರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.

Preparations for the celebration of Dr. B.R. Ambedkar Jayanti

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....