Home namma chikmagalur chikamagalur ಅನ್ಸೆನ್ ಟ್ರೇಡಿಂಗ್ ಅಮಿಷ-1,28 ಕೋಟಿ ರೂ ವಂಚನೆ
chikamagalurHomeLatest Newsnamma chikmagalur

ಅನ್ಸೆನ್ ಟ್ರೇಡಿಂಗ್ ಅಮಿಷ-1,28 ಕೋಟಿ ರೂ ವಂಚನೆ

Share
Share

ಕಡೂರು: ಅನ್ಸೆನ್ ಟ್ರೇಡಿಂಗ್ ಅಮಿಷಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಿವಪುರ ಗ್ರಾಮದ ಕಲ್ಲೇಗೌಡ ಎಂಬುವವರು ಸಿಲುಕಿ ಬರೋಬ್ಬರಿ 1,28,10,000/- ರೂ.ಗಳನ್ನು ಕಳೆದುಕೊಂಡು ಪೊಲೀಸರ ಮೊರೆ ಹೋಗಿದ್ದಾರೆ.

ಫೇಸ್‌ಬುಕ್‌ನಲ್ಲಿ ಕಂಡ ‘FYERS” ಎಂಬ ಟ್ರೇಡಿಂಗ್ ಜಾಹೀರಾತನ್ನು ಕ್ಲಿಕ್ ಮಾಡಿದ ಇವರು, ‘F8-FYERS Securities Group’ ಎಂಬ ವಾಟ್ಸಾಪ್ ಗ್ರೂಪ್ ಸೇರಿಕೊಂಡಿದ್ದರು. ಆರಂಭದಲ್ಲಿ ಕೇವಲ 60,000/- ರೂ. ಹೂಡಿಕೆ ಮಾಡಿದಾಗ ಅದಕ್ಕೆ ಪ್ರತಿಯಾಗಿ 17,800/- ರೂ. ಲಾಭಾಂಶ ನೀಡುವ ಮೂಲಕ ವಂಚಕರು ಇವರ ವಿಶ್ವಾಸ ಗಳಿಸಿದ್ದರು.

ಹೆಚ್ಚಿನ ಲಾಭದ ಆಸೆಗೆ ಬಿದ್ದ ಕಲ್ಲೇಗೌಡರು ಮತ್ತು ಅವರ ಸ್ನೇಹಿತರು ಹಂತ ಹಂತವಾಗಿ ವಿವಿಧ ಖಾತೆಗಳಿಗೆ ಒಟ್ಟು 1.28 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಆದರೆ ನಂತರ ಹಣವನ್ನು ಹಿಂಪಡೆಯಲು (Withdraw) ಪ್ರಯತ್ನಿಸಿದಾಗ ಅದು ಸಾಧ್ಯವಾಗದೆ ತಾವು ಮೋಸ ಹೋಗಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಸಂತ್ರಸ್ತರು ಸೆನ್ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಇಂತಹ ವಂಚನೆಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಮನವಿ ಮಾಡಲಾಗಿದೆ.

Unsen Trading Amish-Rs 1.28 crore fraud

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....