Home ಬಿ.ಟಿ. ಮಲ್ಲೇನಹಳ್ಳಿ ಗ್ರಾಮದ ಬಳಿ ದಿನಬಳಕೆಯ ವಸ್ತುಗಳ ಕಳವು
HomeKadurLatest Newsnamma chikmagalur

ಬಿ.ಟಿ. ಮಲ್ಲೇನಹಳ್ಳಿ ಗ್ರಾಮದ ಬಳಿ ದಿನಬಳಕೆಯ ವಸ್ತುಗಳ ಕಳವು

Share
Share

ಕಡೂರು: ತಾಲ್ಲೂಕಿನ ಪಂಚನಹಳ್ಳಿ ಸಮೀಪದ ಬಿ.ಟಿ. ಮಲ್ಲೇನಹಳ್ಳಿ ಬಳಿ ದಿನಬಳಕೆಯ ವಸ್ತುಗಳನ್ನು ಸಾಗಿಸುತ್ತಿದ್ದ ಲಾರಿಯಿಂದ ಗ್ರಾಮಸ್ಥರು ಸರಂಜಾಮು ದೋಚಿದ ಘಟನೆ ಶನಿವಾರ ನಡೆದಿದೆ.

ಚಿಕ್ಕಬಳ್ಳಾಪುರದಿಂದ ಕಡೂರು ಎಪಿಎಂಸಿಯ ಏಜೆನ್ಸಿಗೆ ಸೋಪು, ಸೋಪಿನ ಪುಡಿ, ಶಾಂಪು, ಪೌಡರ್, ಕ್ರೀಮ್ ಸೇರಿದಂತೆ ವಿವಿಧ ದಿನ ಬಳಕೆಯ ವಸ್ತುಗಳನ್ನು ಸಾಗಿಸುತ್ತಿದ್ದ ಲಾರಿ, ಗ್ರಾಮದ ತಿರುವಿನಲ್ಲಿ ಸಿಲುಕಿಕೊಂಡಿತ್ತು.

ಚಾಲಕ ಸಹಾಯಕ್ಕಾಗಿ ಪಕ್ಕದ ಗ್ರಾಮಕ್ಕೆ ತೆರಳಿದ್ದ ವೇಳೆ, ಸುತ್ತಮುತ್ತಲಿನ ಬಿ.ಟಿ. ಮಲ್ಲೇನಹಳ್ಳಿ, ತಿಮ್ಮಲಾಪುರ, ಚೌಡಿಪಾಳ್ಯ, ದೊಡ್ಡಹಟ್ಟಿ, ದೋಣನಕಟ್ಟೆ ಕಣಕಟ್ಟೆ ಗ್ರಾಮದ ಕೆಲವರು ಲಾರಿಯಲ್ಲಿದ್ದ ಸಾಮಗ್ರಿ ಹೊತ್ತೊಯ್ದಿದ್ದರು.

ಈ ಸಂಬಂಧ ಲಾರಿ ಚಾಲಕ ಮತ್ತು ಮಾಲೀಕ ಪಂಚನಹಳ್ಳಿ ಪೊಲೀಸರಲ್ಲಿ ದೂರು ಸಲ್ಲಿಸಿದ್ದಾರೆ. ಭಾನುವಾರ ಬೆಳಿಗ್ಗೆಯಿಂದಲೇ ಕಾರ್ಯಪ್ರವೃತ್ತರಾದ ಪೊಲೀಸರು ತಮಗೆ ದೊರೆತ ಮಾಹಿತಿ ಅನುಸಾರ ಕೆಲವು ಗ್ರಾಮಗಳಿಗೆ ತೆರಳಿ ಧ್ವನಿವರ್ಧಕದ ಮೂಲಕ ಘೋಷಣೆ ಮಾಡಿಸಿ, ಸಾಮಗ್ರಿ ಹಿಂತಿರುಗಿಸುವಂತೆ ಸೂಚಿಸಿದರು.

ಪಂಚನಹಳ್ಳಿ ಪಿಎಸ್‌ಐ ಜಿ. ಮಂಜುನಾಥ್, ಲಾರಿಯ ಮಾಲೀಕ ಮತ್ತು ಚಾಲಕರ ಉಪಸ್ಥಿತಿಯಲ್ಲಿ ಹಲವರು ತಾವು ಹೊತ್ತೊಯ್ದ ಸಾಮಗ್ರಿಗಳನ್ನು ಹಿಂತಿರುಗಿಸಿದರು.

ಗ್ರಾಮಸ್ಥರು ಸಾಮಗ್ರಿಗಳನ್ನು ಹೊತ್ತೊಯ್ಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ (ಇನ್ಸ್ಟಾಗ್ರಾಂ) ಹರಿದಾಡುತ್ತಿದೆ. ಪೊಲೀಸರು ಸಂಗ್ರಹಿಸಿದ ಸರಂಜಾಮುಗಳನ್ನು ಲಾರಿಯವರಿಗೆ ಹಿಂತಿರುಗಿಸಿದರು.

BT Theft of daily necessities near Mallenahalli village

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....