Home Crime News ಆಂಧ್ರಪ್ರದೇಶ ಯುವಕ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ
Crime NewsHomeLatest Newsnamma chikmagalurTarikere

ಆಂಧ್ರಪ್ರದೇಶ ಯುವಕ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ

Share
Share

ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಆಂಧ್ರಪ್ರದೇಶ ಮೂಲದ 26 ವರ್ಷದ ಯುವಕ ವಿನಯ್ ರೆಡ್ಡಿ ಭದ್ರಾ ಬಲದಂಡೆ ನಾಲೆಯ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭೋಪಾಲ್ ಮೂಲದ ಪ್ರತಿಷ್ಠಿತ ಕಂಪನಿಯೊಂದರಲ್ಲಿ ನೂಪರ್‌ವೈಸರ್ ಆಗಿ ಸೇವೆ ಸಲ್ಲಿಸುತ್ತಿದ್ದ ಇವರು, ಪ್ರಸ್ತುತ ಭದ್ರಾ ಜಲಾಶಯದಿಂದ ಚಿತ್ರದುರ್ಗಕ್ಕೆ ನೀರು ಸರಬರಾಜು ಮಾಡುವ ಪ್ರಮುಖ ಯೋಜನೆಯ ಕಾಮಗಾರಿಯಲ್ಲಿ ಸಕ್ರಿಯರಾಗಿದ್ದರು.ಬದುಕು ಕಟ್ಟಿಕೊಳ್ಳಬೇಕಿದ್ದ ಈ ಯುವಕನ ಸಾವಿಗೆ ಕೌಟುಂಬಿಕ ಸಮಸ್ಯೆಗಳೇ ಪ್ರಬಲ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆ ನಡೆದ ಬಳಿಕ ಮೃತದೇಹಕ್ಕಾಗಿ ತೀವ್ರ ಶೋಧ ನಡೆಸಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಖ್ಯಾತ ಮುಳುಗು ತಜ್ಞ ಮಲ್ಪೆ ಈಶ್ವರ್ ಅವರ ನೇತೃತ್ವದ ತಂಡವು ಹರಸಾಹಸ ಪಟ್ಟು ಶವವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.

ಆಂಧ್ರದ ಮೂಲದವರಾದ ವಿನಯ್ ರೆಡ್ಡಿ ಅವರ ಅಕಾಲಿಕ ಸಾವು ಅವರ ಕುಟುಂಬಸ್ಥರಲ್ಲಿ ಹಾಗೂ ಕೆಲಸದ ಸಹೋದ್ಯೋಗಿಗಳಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಈ ಕುರಿತು ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆತ್ಮಹತ್ಯೆಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ತನಿಖೆಯನ್ನು ಮುಂದುವರಿಸಿದ್ದಾರೆ.

Andhra Pradesh youth commits suicide by jumping into Bhadra river

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....