ಕಡೂರು: ಯಗಟಿ ಗ್ರಾಮದ ಬಳಿ ನಡೆದ ದುರ್ಘಟನೆಯಲ್ಲಿ ಬೈಕ್ ಸವಾರನ ಬೇಜವಾಬ್ದಾರಿಯಿಂದಾಗಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಪರಮೇಶ್ವರಪ್ಪ ಎಂಬುವವರು ತಮ್ಮ ಬೈಕಿನಲ್ಲಿ ಪತ್ನಿ ದ್ರಾಕ್ಷಾಯಣಮ್ಮ ಮತ್ತು ಮೊಮ್ಮಗನನ್ನು ಕೂರಿಸಿಕೊಂಡು ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ, ಹಿಂಬದಿ ಕುಳಿತಿದ್ದ ದ್ರಾಕ್ಷಾಯಣಮ್ಮ ಅವರು ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ.
ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದ ಅವರನ್ನು ತಕ್ಷಣ ಯಗಟಿ ಮತ್ತು ಕಡೂರು ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿ ಸುರೇಶ ಎಂಬುವವರು ನೀಡಿದ ದೂರಿನ ಮೇರೆಗೆ ಯಗಟಿ ಪೊಲೀಸರು ಬೈಕ್ ಚಾಲಕ ಪರಮೇಶಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Woman dies due to irresponsible biker
Leave a comment