Home namma chikmagalur chikamagalur ಸಾರ್ವಜನಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ
chikamagalurHomeLatest Newsnamma chikmagalur

ಸಾರ್ವಜನಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ

Share
Share

ಚಿಕ್ಕಮಗಳೂರು: ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ ದೇಶದ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳು ಮತ್ತು ಸಾಂಸ್ಕೃತಿಕ ವೈವಿಧತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು, ಭಾರತದ ಮೊದಲ ಡಿಜಿಟಲ್ ಜನಗಣತಿ ಮತ್ತು ೧೬ನೇ ಜನಗಣತಿಯು ಏಪ್ರಿಲ್‌ನಿಂದ ಎರಡು ಹಂತದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜನಗಣತಿ ೨೦೨೭ರ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಅವರು ಮಾತನಾಡಿ  ಜನಗಣತಿಯ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದಾಗಿದೆ ಎಂದರು

ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏಪ್ರಿಲ್ ೧೬ ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ ೧೫ ದಿನಗಳ ಮುಂಚಿತವಾಗಿ ಅಂದರೆ ಏಪ್ರಿಲ್ ೧ ರಿಂದ ೧೫ರವರೆಗೆ ಸ್ವಯಂ ಗಣತಿ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಸ್ವಯಂ ಗಣತಿ ವೆಬ್ ಪೋರ್ಟಲ್ hಣಣಠಿ://se.ಛಿeಟಿsus.gov.iಟಿ ಬಳಸಿಕೊಂಡು ತಮ್ಮ ಕುಟುಂಬದ ಸಾಮಾನ್ಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ ೧ ರಿಂದ ೧೫ರವರೆಗೆ ಸ್ವಯಂ ಗಣತಿ ರಿಪೋರ್ಟರ್ ಲಭ್ಯವಿದ್ದು, ಮೊಬೈಲ್, ಡೆಸ್ಕ್‌ಟಾಪ್, ಲ್ಯಾಪ್‌ಟಾಪ್ ಸಾಧನಗಳ ಮೂಲಕ ನಮೂದಿಸಬಹುದು. ಇದರಿಂದ ಸಮಯದ ಉಳಿತಾಯ ಜೊತೆಗೆ ನಿಖರ ಹಾಗೂ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿಯಾಗಲಿದೆ ಎಂದರು.

ಮಾಹಿತಿ ಭರ್ತಿಯ ವೇಳೆ ಕುಟುಂಬಗಳು ತಮ್ಮ ಸ್ಥಳದ ವಿವರಗಳನ್ನು (ರಾಜ್ಯ, ಜಿಲ್ಲೆ, ತಾಲ್ಲೂಕು, ಪಟ್ಟಣ/ಗ್ರಾಮ/ ನಗರ ಇತ್ಯಾದಿ) ಕಡ್ಡಾಯವಾಗಿ ನಮೂದಿಸಬೇಕು. ಸ್ಥಳವನ್ನು ನಿಖರವಾಗಿ ಗುರುತಿಸಲು ಪಿನ್‌ಕೋಡ್ ಮತ್ತು ಡಿಜಿಟಲ್ ಮ್ಯಾಪ್ ಮೂಲಕ ಮನೆಯ ಸ್ಥಳವನ್ನು ಗುರುತಿಸುವ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದರು.

ಸ್ವಯಂ ಗಣತಿ  ಪೋರ್ಟಲ್‌ನಲ್ಲಿ ಕೇಳಿರುವ ಪ್ರಶ್ನೆಗಳಿಗೆ ಮನೆಪಟ್ಟಿ ಕಾರ್ಯಾಚರಣೆ, ಮೊಬೈಲ್ ಆಪ್‌ನಲ್ಲಿರುವಂತೆ ರೂಪಿಸಲಾಗಿದ್ದು, ಸಾರ್ವಜನಿಕರಿಗೆ ಪದೇ ಪದೇ ಕೇಳುವ ಪ್ರಶ್ನೆಗಳು ಮತ್ತು ಮಾರ್ಗಸೂಚಿಗಳನ್ನು ಇದರಲ್ಲಿ ಒದಗಿಸಲಾಗಿದೆ. ಕುಟುಂಬವು ತಮ್ಮ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ ಗಣತಿ ಐ.ಡಿ. ಅನ್ನು ನೀಡಲಾಗುತ್ತದೆ. ಈ ಐ.ಡಿ.ಯನ್ನು ಎಸ್‌ಎಂಎಸ್ ಮತ್ತು ಇ-ಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಈ ಐ.ಡಿ.ಯನ್ನು ಸಾರ್ವಜನಿಕರು ಹಂಚಿಕೊಳ್ಳಬಹುದು ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಜನಗಣತಿ ವಿವರಗಳನ್ನು ಆನ್‌ಲೈನ್‌ನಲ್ಲಿ ವೇಗವಾಗಿ ಮತ್ತು ಸುರಕ್ಷಿತವಾಗಿ ಭರ್ತಿ ಮಾಡಬಹುದಾಗಿದ್ದು, ಏಪ್ರಿಲ್ ೧೬ ರಿಂದ ಮೇ ೧೫ರ ವರೆಗಿನ ಅವಧಿಯಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸುತ್ತಾರೆ. ಈ ವೇಳೆಯಲ್ಲಿ ಸಾರ್ವಜನಿಕರು ಗಣತಿದಾರರು ಮನೆಗೆ ಬಂದಾಗ ಅದನ್ನು ಹಂಚಿಕೊಳ್ಳಬಹುದು. ಒಂದು ವೇಳೆ ಸಾರ್ವಜನಿಕರು ತಮ್ಮ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ ಗಣತಿದಾರರು ತಮ್ಮಿಂದಲೇ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸ್ವಯಂ ಗಣತಿಯು ೧೦೦% ಗೌಪ್ಯತೆಯ ಭದ್ರತೆ ನೀಡಲಿದ್ದು, ಪ್ರತಿಯೊಬ್ಬರೂ ಸ್ವಯಂ ಗಣತಿಯಲ್ಲಿ ಭಾಗವಹಿಸಿ ದೇಶದ ಜವಾಬ್ದಾರಿಯುತ ನಾಗರಿಕರಾಗುವಂತೆ ತಿಳಿಸಿದರು.

ಈಗಾಗಲೇ ಗಣತಿಯಲ್ಲಿ ಭಾಗವಹಿಸುವ ಎಲ್ಲರಿಗೂ ತರಬೇತಿ ನೀಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು ೨೫೨೮ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ೨೨೨೦ ಗಣತಿದಾರರು ಹಾಗೂ ೩೮೦ ಮೇಲ್ವಿಚಾರಕರನ್ನು ಗಣತಿ ಕಾರ್ಯಕ್ಕೆ ನೇಮಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಗೌರವಶೆಟ್ಟಿ ಹಾಜರಿದ್ದರು.

Public allowed to participate in self-enumeration

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....