Home namma chikmagalur chikamagalur ಏ.2ಕ್ಕೆ ಕಡೂರಿನಲ್ಲಿ ದೇವರದಾಸಿಮಯ್ಯ ಜಯಂತಿ
chikamagalurHomeLatest Newsnamma chikmagalur

ಏ.2ಕ್ಕೆ ಕಡೂರಿನಲ್ಲಿ ದೇವರದಾಸಿಮಯ್ಯ ಜಯಂತಿ

Share
Oplus_153223168
Share

ಚಿಕ್ಕಮಗಳೂರು: ಜಿಲ್ಲಾ ಮಟ್ಟದ ೧೦೪೬ನೇ ಶ್ರೀ ದೇವರ ದಾಸಿಮಯ್ಯನವರ ಜಯಂತಿ ಮತ್ತು ದೇವಾಂಗ ಜನಜಾಗೃತಿ ಹಾಗೂ ಸಂಘಟನಾ ಸಮಾವೇಶ ಏಪ್ರಿಲ್ ೨ ರ ಗುರುವಾರ ಕಡೂರು ಪಟ್ಟಣದ ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ (ಎಂಆರ್‌ಎಂ ರಂಗಮಂದಿರ) ಕಡೂರು ತಾಲೂಕು ದೇವಾಂಗ ಸಮಾಜ ಹಾಗೂ ಜಿಲ್ಲಾ ಸಂಘದ ವತಿಯಿಂದ ಅದ್ದೂರಿಯಾಗಿ ಜರುಗಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಶ್ರೀನಿವಾಸ್ ತಿಳಿಸಿದರು.

ಅವರು ಇಂದು ಇಲ್ಲಿನ ಪ್ರೆಸ್‌ಕ್ಲಬ್‌ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಏಪ್ರಿಲ್ ೨ ರ ಗುರುವಾರ ಬೆಳಗ್ಗೆ ೧೦ ಗಂಟೆಗೆ ಪಟ್ಟಣದ ಶ್ರೀ ವೆಂಕಟೇಶ್ವರ ದೇವಾಲಯದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಶ್ರೀ ದೇವರ ದಾಸಿಮಯ್ಯನವರ ಭಾವಚಿತ್ರದೊಂದಿಗೆ ವಿವಿಧ ಜಾನಪದ ಕಲಾತಂಡಗಳ ಮೂಲಕ ಅದ್ದೂರಿಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಹಂಪಿ ಹೇಮಕುಟದ ದೇವಾಂಗ ಗುರುಗಳಾದ ಶ್ರೀ ದಯಾನಂದ ಪುರಿ ಸ್ವಾಮಿ, ಮಹಾರಾಷ್ಟ್ರದ ಸೊಲ್ಲಾಪುರದ ಶ್ರೀ ಅಭಿನವ ರಾಮಲಿಂಗ ಪಟ್ಟದೇವರು ಹಾಗೂ ಜಿಲ್ಲೆಯ ಸಮಾಜ ಬಾಂಧವರು ಭಾಗವಹಿಸಲಿದ್ದಾರೆ ಎಂದರು.

ದೇವಾಂಗ ಸಂಘದ ಕಡೂರು ತಾಲೂಕು ಅಧ್ಯಕ್ಷ ಎಚ್.ಎಲ್.ರಂಗನಾಥ ಮಾತನಾಡಿ, ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಿಗೆ ತೆರಳಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸುವಂತೆ ತಿಳಿಸಲಾಗಿದೆ. ಜಿಲ್ಲೆಯಾದ್ಯಂತ ಗ್ರಾಮಗಳಿಂದ ಸುಮಾರು ೫,೦೦೦ ಕ್ಕೂ ಹೆಚ್ಚು ಸಮಾಜ ಬಾಂಧವರು ಆಗಮಿಸುವ ನಿರೀಕ್ಷೆ ಇದೆ. ಈ ಮೂಲಕ ಸಮಾಜದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಾಗುವುದು. ಸಮಾರಂಭದದಲ್ಲಿ ಪಟ್ಟಣದ ವೈದ್ಯರಾದ ಡಾ. ಛಾಯಾಪತಿ ಅವರಿಗೆ ದೇವಲ ಮಹರ್ಷಿ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದರು.

ದೇವಾಂಗ ಸಮಾಜದ ಕಡೂರು ನಗರ ಅಧ್ಯಕ್ಷರಾದ ಹರೀಶ್‌ಕುಮಾರ್ ಮಾತನಾಡಿ, ಭವ್ಯ ಮೆರವಣಿಗೆಯ ನಂತರ ವೇದಿಕೆಯ ಕಾರ್ಯಕ್ರಮಗಳು ಗುರುಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಲಿದೆ, ಶಾಸಕ ಕೆ.ಎಸ್. ಆನಂದ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ, ರಾಜ್ಯಸಭಾ ಸದಸ್ಯ ಕೆ.ನಾರಾಯಣ್, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಶಾಸಕರುಗಳಾದ ಎಚ್.ಡಿ. ತಮ್ಮಯ್ಯ, ಸಿ.ಟಿ.ರವಿ, ಮಾಜಿ ಸಚಿವರಾದ ಉಮಾಶ್ರೀ, ಎಂ.ಡಿ. ಲಕ್ಷ್ಮಿ ನಾರಾಯಣ್, ಜಿ.ಎಚ್.ಶ್ರೀನಿವಾಸ್, ಎಸ್.ಎಲ್.ಭೋಜೇಗೌಡ, ಮಾಜಿ ಶಾಸಕ ವೈ.ಎಸ್.ವಿ.ದತ್ತ, ಬೆಳ್ಳಿ ಪ್ರಕಾಶ್ ಮುಂತಾದವರು ಭಾಗವಹಿಸಲಿದ್ದು ಸಾಹಿತಿಗಳಾದ ನಾಗಶ್ರೀ ತ್ಯಾಗರಾಜ್ ಉಪನ್ಯಾಸ ನೀಡಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಹಕಾರ್ಯದರ್ಶಿ ಸಿ.ಎಸ್ ರವಿಕುಮಾರ್, ಆಚರಣಾ ಸಮಿತಿಯ ಯೋಗೀಶ್, ಭಗವತಿ ಹರೀಶ್, ಬೆಂಕಿ ಶೇಖರಪ್ಪ, ಮತ್ತಿತರರು ಉಪಸ್ಥಿತರಿದ್ದರು.

Devadasimayya Jayanti to be celebrated in Kadur on 2nd April

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....