Home namma chikmagalur chikamagalur ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದವರ ಬಂಧನ
chikamagalurLatest Newsnamma chikmagalur

ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದವರ ಬಂಧನ

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತಾಂತರದ ಭೂತ ಮತ್ತೆ ದರ್ಶನ ನೀಡಿದೆ. ವಾರದ ಸಂತೆಯಲ್ಲಿ ವ್ಯಾಪಾರಕ್ಕೆ ಬಂದಿದ್ದ ಅಮಾಯಕ ಜನರನ್ನು ಗುರಿಯಾಗಿಸಿಕೊಂಡು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಮತ್ತು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಈ ವೇಳೆ ನಡೆದ ಸಿನಿಮೀಯ ಮಾದರಿಯ ಚೇಸ್ ಈಗ ಜಿಲ್ಲೆಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.

ಹೊಸಪೇಟೆ ಗ್ರಾಮದಲ್ಲಿ ಇಂದು ವಾರದ ಸಂತೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಮೂಲದ ಇಬ್ಬರು ವ್ಯಕ್ತಿಗಳು ಓಮ್ನಿ ವ್ಯಾನ್‌ನಲ್ಲಿ ಗ್ರಾಮಕ್ಕೆ ಆಗಮಿಸಿದ್ದರು. ಸಂತೆಗೆ ಬಂದಿದ್ದ ಜನರಿಗೆ ‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’ ಎಂಬ ಮುಖಪುಟದ ಪುಸ್ತಕಗಳನ್ನು ಹಂಚುತ್ತಾ, ಹಿಂದೂ ಧರ್ಮದಿಂದ ಮತಾಂತರಗೊಳ್ಳುವಂತೆ ಪ್ರೇರೇಪಿಸುತ್ತಿದ್ದರು ಎನ್ನಲಾಗಿದೆ.

ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದಾರೆ. ಓರ್ವ ಯುವಕ ಹಾಗೂ ಮತ್ತೊಬ್ಬ ಮಧ್ಯವಯಸ್ಕನನ್ನು ಸೆರೆಹಿಡಿದ ಕಾರ್ಯಕರ್ತರು, ‘ನೀವು ಹಿಂದೂ ಧರ್ಮದವರಾಗಿದ್ದುಕೊಂಡು ಮತಾಂತರಗೊಂಡಿದ್ದೀರಾ? ಈಗ ಬೇರೆಯವರನ್ನು ಏಕೆ ಮತಾಂತರ ಮಾಡುತ್ತಿದ್ದೀರಾ? ಬನ್ನಿ, ನೀವು ಕೂಡ ಮರಳಿ ಹಿಂದೂ ಧರ್ಮಕ್ಕೆ ಸೇರಿಕೊಳ್ಳಿ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಎರಡೂ ತಂಡಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ಕಾರ್ಯಕರ್ತರ ಪ್ರಶ್ನೆಗಳಿಗೆ ಗಾಬರಿಗೊಂಡ ಮತಾಂತರ ತಂಡದ ಇಬ್ಬರು, ತಮ್ಮ ಓಮ್ನಿ ವ್ಯಾನ್ ಹತ್ತಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಅತ್ಯಂತ ವೇಗವಾಗಿ ವ್ಯಾನ್ ಚಲಾಯಿಸಿಕೊಂಡು ತಪ್ಪಿಸಿಕೊಳ್ಳಲು ಮುಂದಾದಾಗ, ಹಿಂದೂ ಕಾರ್ಯಕರ್ತರು ತಮ್ಮ ಬೈಕ್‌ಗಳಲ್ಲಿ ಅವರನ್ನು ಚೇಸ್ ಮಾಡಲು ಶುರು ಮಾಡಿದ್ದಾರೆ. ಹೊಸಪೇಟೆ ಗ್ರಾಮದಿಂದ ಸುಮಾರು 10 ಕಿಲೋ ಮೀಟರ್ ದೂರದವರೆಗೆ ಈ ಸಿನಿಮೀಯ ಮಾದರಿಯ ಚೇಸ್ ನಡೆದಿದೆ. ಕೊನೆಗೆ ಕೈಮರ ಚೆಕ್ ಪೋಸ್ಟ್ ಬಳಿ ಓಮ್ನಿ ವ್ಯಾನ್ ಅನ್ನು ಅಡ್ಡಗಟ್ಟಿದ ಕಾರ್ಯಕರ್ತರು, ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಚೇಸ್ ಮಾಡಿ ಹಿಡಿದ ಇಬ್ಬರನ್ನು ಕಾರ್ಯಕರ್ತರು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. “ಭದ್ರಾವತಿಯಿಂದ ಹೊಸಪೇಟೆ ಗ್ರಾಮಕ್ಕೆ ಬರುವ ಮಾರ್ಗ ಮಧ್ಯದ ಎಲ್ಲಾ ಹಳ್ಳಿಗಳಲ್ಲೂ ಇವರು ಮತಾಂತರಕ್ಕೆ ಪ್ರೇರೇಪಿಸಿರುವ ಸಾಧ್ಯತೆ ಇದೆ” ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಓಮ್ನಿ ವ್ಯಾನ್ ಹಾಗೂ ಮತಾಂತರಕ್ಕೆ ಬಳಸುತ್ತಿದ್ದ ಪುಸ್ತಕಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಘಟನೆಯು ಜಿಲ್ಲೆಯಲ್ಲಿ ಮತಾಂತರದ ಜಾಲ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದ್ದು, ಪೊಲೀಸರು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ

Arrest of those inciting conversion.

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....