Home namma chikmagalur chikamagalur ಬೈಕ್ ಸವಾರನ ಮೇಲೆ ಕಾಡಾನೆ ದಾಳಿ
chikamagalurHomeLatest Newsnamma chikmagalur

ಬೈಕ್ ಸವಾರನ ಮೇಲೆ ಕಾಡಾನೆ ದಾಳಿ

Share
Share

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಸಾರ್ವಜನಿಕರಲ್ಲಿ ಭೀತಿ ಮತ್ತಷ್ಟು ಹೆಚ್ಚಾಗಿದೆ. ಚಿಕ್ಕಮಗಳೂರು ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಕಾಡಾನೆಯೊಂದು ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದಾಗ, ಯುವಕ ಸಮಯಪ್ರಜ್ಞೆಯಿಂದ ಬೈಕ್ ಬಿಟ್ಟು ಓಡಿ ಹೋಗಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಆದರೆ ಆಕ್ರೋಶಗೊಂಡ ಅನೆ ಬೈಕನ್ನು ತುಳಿದು ಸಂಪೂರ್ಣವಾಗಿ ಪುಡಿಪುಡಿ ಮಾಡಿದೆ. ಈ ಭಾಗದಲ್ಲಿ ಕಳೆದ ಒಂದು ವರ್ಷದಲ್ಲಿ ಕಾಡಾನೆ ದಾಳಿಯಿಂದಾಗಿ ಒಟ್ಟು ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು, ಮಲೆನಾಡಿಗರು ನಿರಂತರವಾಗಿ ಆತಂಕದ ನೆರಳಿನಲ್ಲಿ ಬದುಕುವಂತಾಗಿದೆ.

ಈ ಹಿಂದೆ ಆನೆಗಳ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರು ಪೊಲೀಸರಿಂದ ಏಟು ತಿಂದು, ಮೊಕದ್ದಮೆಗಳನ್ನು ಎದುರಿಸುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೊಂದು ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡು, ತೊಂದರೆ ನೀಡುತ್ತಿರುವ ಕಾಡಾನೆಯನ್ನು ಕೂಡಲೇ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಗುಡ್ಡೆಕೊಪ್ಪ ಮತ್ತು ಸುತ್ತಮುತ್ತಲಿನ ಹಳ್ಳಿಗರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Wild elephant attacks biker

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಕಾಳಿ ವೀರಭದ್ರೇಶ್ವರರ ಸಿಡಿ ಮಹೋತ್ಸವ

ಕಳಾಸಪುರ: ಇಲ್ಲಿನ ಭದ್ರಕಾಳಿ ವೀರಭದ್ರೇಶ್ವರರ 24ನೇ ವರ್ಷದ ರಥೋತ್ಸವ ಮತ್ತು ಸಿಡಿ ಮಹೋತ್ಸವವನ್ನು ಜನ ಭಕ್ತಿ ಮತ್ತು ಹರ್ಷದಿಂದ ಆಚರಿಸಿದರು. ಕಳಾಸಪುರ,ಗಾಳಿಹಳ್ಳಿ,ಆಣ್ಣೇದಡಿಕೆ,ಹುಲ್ಲೇನಹಳ್ಳಿ,ದೇವಗೊಂಡನ ಹಳ್ಳಿ ಮತ್ತು ಕಟ್ಟೇತಿಮ್ಮನಹಳ್ಳಿ ಸುತ್ತ ಮುತ್ತಲಿನ ಭಕ್ತರು ಪ್ರತಿ...

ಡಾ.ಪ್ರದೀಪ್ ಕೆಂಜಿಗೆ ಕೃತಿಗೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಸೃಜನಶೀಲ ಲೇಖಕ ಹಾಗೂ ಸೂಕ್ಷ್ಮಮತಿಯ ಮಾತುಗಾರ ಡಾ.ಪ್ರದೀಪ್ ಕೆಂಜಿಗೆ ಅವರ ನರವಾನರ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿಯಿಂದ ಕೊಡಮಾಡುವ 2024ನೇ ಸಾಲಿನ ಅತ್ಯುತ್ತಮ ಪುಸ್ತಕ ಪ್ರಶಸ್ತಿಗೆ ಭಾಜನವಾಗಿದೆ....

Related Articles

ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ

ಚಿಕ್ಕಮಗಳೂರು: ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿಂದು ರೂ.೭.೩೯ ಕೋಟಿ ವೆಚ್ಚದ ನೂತನ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ...

ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ಮೊಟ್ಟೆ ವಿತರಣೆ

ಚಿಕ್ಕಮಗಳೂರು: ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ಇನ್ಮುಂದೆ ವಾರಕ್ಕೆ ಆರು ಮೊಟ್ಟೆಯಂತೆ ತಿಂಗಳಿಗೆ 25 ಮೊಟ್ಟೆ ವಿತರಣೆ...

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರಿನ ೧೫೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು...

ಪರಿಹಾರ ನೀಡಲು ಅರಣ್ಯ ಇಲಾಖೆಯ ಅಧಿಕಾರಿಯಿಂದ ಲಂಚಕ್ಕಾಗಿ ಬೇಡಿಕೆ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ಹಾವಳಿಯಿಂದ ಕಂಗೆಟ್ಟಿರುವ ರೈತರಿಗೆ ಸಾಂತ್ವನ ಹೇಳಬೇಕಾದ ಅರಣ್ಯ ಇಲಾಖೆಯ ಅಧಿಕಾರಿಯೇ ಈಗ...