Home namma chikmagalur chikamagalur ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರಿನ ೧೫೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ನಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಎಐಡಿಎಸ್‌ಒ ರಾಜ್ಯಾಧ್ಯಕ್ಷೆ ಕೆ.ಎಸ್.ಅಶ್ವಿನಿ ಮಾತನಾಡಿ, ಜ್ಯೋತಿರಾವ್ ಫುಲೆ, ಸಾವಿತ್ರಿಬಾಯಿ ಫುಲೆ ತಮ್ಮ ಜೀವನವನ್ನೇ ಶಾಲೆಗಳಿಗಾಗಿ ಅರ್ಪಿಸಿದರು. ಕಳೆದ ಬಿಜೆಪಿ ಸರ್ಕಾರ ಸಂಯೋಜನೆ ಹೆಸರಿನಲ್ಲಿ ೧೩,೮೦೦ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿತ್ತು. ಆಗ ಇಡೀ ರಾಜ್ಯದಾದ್ಯಂತ ಹೋರಾಟ ಮಾಡಿ ಸರ್ಕಾರಿ ಶಾಲೆಗಳನ್ನು ಉಳಿಸಿದ್ದೆವು. ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ೪೦ ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಒಟ್ಟಾರೆ ಎಲ್ಲ ಸರ್ಕಾರಗಳ ಅಂತಿಮ ಗುರಿ ಸರ್ಕಾರಿ ಶಾಲೆಗಳನ್ನು ಮುಚ್ಚಿ, ಬಡ ವಿದ್ಯಾರ್ಥಿಗಳಿಂದ ಶಿಕ್ಷಣವನ್ನು ಕಸಿದುಕೊಳ್ಳುವುದೇ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸರ್ಕಾರವು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನಿAದ ೨,೫೦೦ ಕೋಟಿ ರೂ. ಸಾಲ ಮಾಡಿ ತೆರೆಯುತ್ತಿದೆ. ಖಾಸಗಿ ಬ್ಯಾಂಕಿನಿAದ ಸಾಲ ಪಡೆದು ಸರ್ಕಾರಿ ಶಾಲೆಗಳನ್ನು ನಡೆಸುವಂತಹ ಕೆಟ್ಟ ಪರಿಸ್ಥಿತಿಗೆ ಸರ್ಕಾರ ಬಂದಿದೆಯೇ ಎಂದು ಪ್ರಶ್ನಿಸಿದ ಅವರು, ನಾವು ಕಟ್ಟುತ್ತಿರುವ ತೆರಿಗೆಯು ಸಾಲುತ್ತಿಲ್ಲವೇ ಎಂದು ಟೀಕಿಸಿದರು.

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಹೊರಗುತ್ತಿಗೆ ನೀಡಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನಾಗಿ ಪರಿವರ್ತಿಸುವ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ. ಪ್ರತಿಯೊಂದು ಕಿಲೋಮೀಟರ್ ವ್ಯಾಪ್ತಿಯ ಒಳಗೆ ಪ್ರಾಥಮಿಕ ಶಾಲೆ ಇರಬೇಕೆನ್ನುವ ಶಿಕ್ಷಣ ಹಕ್ಕು ಕಾಯ್ದೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಉಲ್ಲಂಘಿಸುತ್ತದೆ ಎಂದರು.

ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ೧೫ ಮ್ಯಾಗ್ನೆಟ್ ಶಾಲೆಗಳನ್ನು ಆಯ್ಕೆ ಮಾಡಿ ೧೫೦ಕ್ಕೂ ಹೆಚ್ಚು ಶಾಲೆಗಳನ್ನು ವಿಲೀನ ಮಾಡುವ ನೆಪದಲ್ಲಿ ಮುಚ್ಚಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಗುಡ್ಡಗಾಡು ಪ್ರದೇಶ. ಎಷ್ಟೋ ಹಳ್ಳಿಗಳಿಗೆ ನಡೆದು ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ರಸ್ತೆಗಳಿವೆ. ಹೀಗಿದ್ದ ಪರಿಸ್ಥಿತಿಯಲ್ಲಿ ಬಸ್ ವ್ಯವಸ್ಥೆಯನ್ನು ಸರ್ಕಾರ ಹೇಗೆ ಒದಗಿಸಲು ಸಾಧ್ಯ ಎಂದು ಪ್ರಶ್ನಿಸಿದರು.

ಇಲ್ಲಿನ ಬಹುತೇಕ ಪಾಲಕರು ಕಾಫಿ ಎಸ್ಟೇಟ್‌ನಲ್ಲಿ ಕೂಲಿ ಮಾಡಲು ಹೋಗುತ್ತಾರೆ. ಸುತ್ತಮುತ್ತ ಕಾಡಿನ ಪ್ರದೇಶ ಆಗಿರುವುದರಿಂದ ಪ್ರಾಣಿಗಳ ಸಮಸ್ಯೆಯೂ ಕೂಡ ಇದೆ. ಇಂತಹ ಪರಿಸ್ಥಿತಿಯಲ್ಲಿ ಪಾಲಕರು ಯಾವ ನಂಬಿಕೆಯ ಮೇಲೆ ತಮ್ಮ ಮಕ್ಕಳನ್ನು ಕಿಲೋಮೀಟರ್ ಗಟ್ಟಲೆ ಇನ್ನೊಂದು ಹಳ್ಳಿಯ ಶಾಲೆಗೆ ಕಳುಹಿಸಲು ಸಾಧ್ಯ. ಆ ಮಕ್ಕಳಿಗೆ ತೊಂದರೆ ಆದಲ್ಲಿ ಯಾರು ಜವಾಬ್ದಾರರು ಎಂದರು.

ಈಗಾಗಲೇ ರಾಜ್ಯದಲ್ಲಿ ೬೨ ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದೆ . ೭ ಸಾವಿರಕ್ಕೂ ಹೆಚ್ಚು ಹೆಚ್ಚು ಏಕೋಪಧ್ಯಾಯ ಶಾಲೆಗಳಿವೆ. ೨೩ ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆ ಕಟ್ಟಡಗಳು ದುರಸ್ತಿಯಾಗಬೇಕಾಗಿದೆ. ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಸರ್ಕಾರಿ ಶಾಲೆಗಳು ಸೊರಗುವಂತೆ ಮಾಡಿ ಸರ್ಕಾರ ಹಿಂಬಾಗಿಲಿನಿAದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಸುನೀಲ್, ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಹೊನ್ನೇಶ್, ಎಐಡಿಎಸ್‌ಒ ಜಿಲ್ಲಾ ಸಂಘಟನಾಕಾರ ಸುನೀಲ್, ಡಿಎಸ್‌ಎಸ್ ಮುಖಂಡ ಲಕ್ಷö್ಮಣ್, ಪ್ರಮುಖರಾದ ಹರೀಶ್, ಚೇತನ್, ಯೋಗೇಶ್, ಅಭಿಷೇಕ್, ಚೈತ್ರಾ ಮತ್ತಿತರರಿದ್ದರು.

Protest against the closure of government schools

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....