Home namma chikmagalur chikamagalur ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಅನಾರೋಗ್ಯ ವಿದ್ಯಾರ್ಥಿ
chikamagalurHomeLatest Newsnamma chikmagalur

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಅನಾರೋಗ್ಯ ವಿದ್ಯಾರ್ಥಿ

Share
Share

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢಶಾಲೆಯಲ್ಲಿ ಮಾನವೀಯತೆ ಮೆರೆಯುವ ಘಟನೆ ನಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಗಗನ್ ಹೊಟ್ಟೆ ನೋವಿನಿಂದ ಬಳಲುತ್ತಿದ್ದರೂ, ತನ್ನ ಧೈರ್ಯದಿಂದ ಪರೀಕ್ಷೆಯನ್ನು ಬರೆದಿದ್ದಾನೆ.

ಪರೀಕ್ಷೆ ಮಧ್ಯೆ ಅಸ್ವಸ್ಥಗೊಂಡ ವಿದ್ಯಾರ್ಥಿಯನ್ನು ತಕ್ಷಣ ಬಣಕಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಡ್ರಿಪ್ ಹಾಕಿಸಿಕೊಂಡ ಸ್ಥಿತಿಯಲ್ಲೇ ವಿದ್ಯಾರ್ಥಿ ಮತ್ತೆ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದಾನೆ.

ಇಂದು ಎಸ್‌ಎಸ್‌ಎಲ್‌ಸಿ ಕೊನೆಯ ಪರೀಕ್ಷೆಯಾಗಿದ್ದು, ಯಾವುದೇ ಪರಿಸ್ಥಿತಿಯಲ್ಲೂ ಪರೀಕ್ಷೆ ತಪ್ಪಿಸಿಕೊಳ್ಳಬಾರದೆಂಬ ಸಂಕಲ್ಪದಿಂದ ಗಗನ್ ಈ ಸಾಹಸ ಮಾಡಿದ್ದಾನೆ.

ಈ ಸಂದರ್ಭದಲ್ಲಿ ಸಮಾಜ ಸೇವಕ ಆರೀಫ್ ಮಾನವೀಯತೆ ತೋರಿಸಿ, ವಿದ್ಯಾರ್ಥಿಗೆ ತಕ್ಷಣ ಚಿಕಿತ್ಸೆ ಒದಗಿಸಿ, ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತಂದು ಸಹಾಯ ಮಾಡಿದ್ದಾರೆ.
ವಿದ್ಯಾರ್ಥಿಯ ಧೈರ್ಯ ಮತ್ತು ಸಮಾಜ ಸೇವಕರ ಮಾನವೀಯತೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

A sick student wrote the SSLC exam.

Share

Leave a comment

Leave a Reply

Your email address will not be published. Required fields are marked *

Don't Miss

ನಿವೇಶನಕ್ಕೆ ಒತ್ತಾಯಿಸಿ ಹೋರಾಟ ವೇದಿಕೆಯಿಂದ ಪ್ರತಿಭಟನೆ

ಮೂಡಿಗೆರೆ: ನಿವೇನಕ್ಕಾಗಿ ಒತ್ತಾಯಿಸಿ ತಾಲೂಕಿನ ಗೋಣಿಬೀಡು ಗ್ರಾ.ಪಂ. ಎದುರು ಗುರುವಾರ ವಸತಿಗಾಗಿ ಹೋರಾಟ ವೇದಿಕೆಯ ಮುಖಂಡರು  ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ವೇದಿಕೆಯ ಗೌರವಾಧ್ಯಕ್ಷ ಬಿ.ರುದ್ರಯ್ಯ ಮಾತನಾಡಿ, ಗೋಣಿಬೀಡು ಹೋಬಳಿ, ಕಮ್ಮರಗೋಡು...

ಚೌಳಹಿರಿಯೂರು ಭಾಗದಲ್ಲಿ ಚಿರತೆ ಕಾಟ

ಕಡೂರು: ತಾಲ್ಲೂಕಿನ ಚೌಳಹಿರಿಯೂರು ಭಾಗದಲ್ಲಿ ಚಿರತೆ ಕಾಟ ಹೆಚ್ಚುತ್ತಿದ್ದು ಜನ, ಜಾನುವಾರುಗಳು ಭೀತಿಯಿಂದ ಬದುಕುವಂತಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಚೌಳಹಿರಿಯೂರು ಸೇರಿದಂತೆ ಸುತ್ತಮುತ್ತ ಇ ತಿಮ್ಮಾಪುರ, ಕುರುಬರಹಳ್ಳಿ, ತಾಂಡ್ಯ, ಮಂಜುನಾಥಪುರ...

Related Articles

ಮುಳ್ಳಯ್ಯನಗಿರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್

ಚಿಕ್ಕಮಗಳೂರು:  ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ  ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ...

ನಗರಸಭೆಯಲ್ಲಿ 2.60 ಕೋಟಿ ರೂ. ಉಳಿತಾಯ ಬಜೆಟ್‌ ಮಂಡನೆ

ಚಿಕ್ಕಮಗಳೂರು: ನಗರ ಸಭೆ ಸಿಬ್ಬಂದಿ ವೇತನ, ವಿದ್ಯುತ್‌ ಬಿಲ್‌ ಪಾವತಿ ಅನುದಾನ ಸೇರಿದಂತೆ ವಾರ್ಷಿಕ ಕೇವಲ 58...

ಕಿತ್ತೂರು ಚೆನ್ನಮ್ಮ ಶಾಲೆಯ ಗೋಧಿ ಹೆಗ್ಗಣಗಳು

ತರೀಕೆರೆ: ಇಲ್ಲಿಗೆ ಸಮೀಪದ ನಂದಿ ಹೊಸಹಳ್ಳಿಯ ಕಿತ್ತೂರು ಚೆನ್ನಮ್ಮವಸತಿ ಶಾಲೆಯಲ್ಲಿ ಗೋಧಿ ತಿನ್ನುವ ಹೆಗ್ಗಣಗಳಿವೆ.ಮಕ್ಕಳ ಆಹಾರ...

ಪೊಲೀಸ್ ಸೇವೆ ಎಂದರೆ ಅದು ಸಮಾಜದ ಭರವಸೆ

ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವುದು ನನ್ನ ಪೂರ್ವಜನ್ಮದ ಪುಣ್ಯ. ಪೊಲೀಸ್ ಎಂದರೆ ಕೇವಲ ಬಂದೂಕು...