Home namma chikmagalur chikamagalur ಶಾಲೆಗಳ ವಿಲೀನ ವಿರೋಧಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಪತ್ರಿಭಟನೆ
chikamagalurHomeLatest Newsnamma chikmagalur

ಶಾಲೆಗಳ ವಿಲೀನ ವಿರೋಧಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಪತ್ರಿಭಟನೆ

Share
Share

ಚಿಕ್ಕಮಗಳೂರು: ತಾಲೂಕಿನ ಬೊಂಬೈಲು ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಬೇರೊಂದು ಶಾಲೆಗೆ ವಿಲೀನಗೊಳಿಸದಿರಲು ಒತ್ತಾಯಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ ನಡೆಸಿದರು.

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಬೊಂಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚದೆ ಉಳಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿಭಟಿಸಿದರು.

ಪ್ರತಿಭಟನಾನಿರತರನ್ನು ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಸಂಘಟನಕಾರ ಅಭಿಷೇಕ್ ಮಾತನಾಡಿ ಸರ್ಕಾರ ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆಂದು ಹೇಳಿ ೪೦ಸಾವಿರಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಮುಂದಾಗಿದೆ ಎಂದು ತಿಳಿಸಿದರು

ಬೊಂಬೈಲು ಶಾಲೆಯನ್ನು ಮುಚ್ಚಿದರೆ ಮಕ್ಕಳು ಮೈಲಿಮನೆ ಶಾಲೆಗೆ ಹೋಗಿ ಓದಬೇಕು.ಈ ಗ್ರಾಮದಲ್ಲಿ ಬಸ್‌ಸೌಲಭ್ಯವಿಲ್ಲ ಗ್ರಾಮದಿಂದ ಸಣ್ಣಮಕ್ಕಳು ನಡೆದುಕೊಂಡುಹೋಗಿ ವಿದ್ಯಾಭ್ಯಾಸ ಮಾಡಿ ಮತ್ತೆ ಮನೆಗೆ ಹಿಂದಿರುಗಲು ಸಾಧ್ಯವೇ ಎಂದು ಪ್ರಶ್ನಿಸಿ,ಸರ್ಕಾರ ವ್ಯವಸ್ಥಿತವಾಗಿ ಶಿಕ್ಷಣವನ್ನು ಬಡವರ, ಕೂಲಿ ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಕಸಿಯುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದರು.

ಶಿಕ್ಷಣ ಸಚಿವರು ನಮ್ಮ ರಕ್ತದಲ್ಲಿ ಕನ್ನಡವಿದೆ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸದನದಲ್ಲಿ ಹೇಳಿ ಹಿಂದೆಯಿಂದ ಆದೇಶವನ್ನು ಹೊರಡಿಸಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ.

ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರ ನಡೆಸಿವೆ. ಈ ಎಂಟು ವರ್ಷಗಳಲ್ಲಿ ಮೂರುವರೆ ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದಾರೆಂದು ಟೀಕಿಸಿದರು.
ಗ್ರಾಮದ ಹರೀಶ್ ಮಾತನಾಡಿ, ನಮ್ಮೂರಶಾಲೆ ಇತ್ತೀಚಿಗೆ ಬೆಳ್ಳಿಹಬ್ಬವನ್ನು ಆಚರಿಸಿಕೊಂಡಿದೆ, ಎಲ್ಲವೂ ಚೆನ್ನಾಗಿ ನಡೆಯುತ್ತಿದೆ. ಇನ್ನು ಮುಂದೆಯೂ ಇದು ಇಲ್ಲಿಯೇ ಉಳಿಯಬೇಕು. ಹಾಗಾಗಿ ಯಾವುದೇ ಕಾರಣಕ್ಕೂ ನಾವು ಈ ಶಾಲೆಯನ್ನು ಮುಚ್ಚಲು ಬಿಡದೆ ಒಟ್ಟಾಗಿ ಹೋರಾಟ ಮಾಡೋಣ ಎಂದರು.

ಪ್ರತಿಭಟನೆಯಲ್ಲಿ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಗ್ರಾಮಸ್ಥರಾದ ಲಕ್ಷ್ಮಣ, ನೀಲ, ರತ್ನ, ಮಂಜುನಾಥ್, ಅಶೋಕ್, ರೇಣುಕಾ, ಪ್ರೇಮ, ಇಂದಿರಾ, ಧರ್ಮೇಂದ್ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

AIDSSO-led protest against school merger

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....