Home namma chikmagalur chikamagalur ಬಿದ್ರಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಕಸದ ರಾಶಿ
chikamagalurHomeLatest Newsnamma chikmagalur

ಬಿದ್ರಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಕಸದ ರಾಶಿ

Share
Share
ಕೊಟ್ಟಿಗೆಹಾರ : ಧರ್ಮಸ್ಥಳ–ಹೋರನಾಡು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಸದ ರಾಶಿಗಳು ಗುಡ್ಡಗಟ್ಟಿರುವ ದುಸ್ಥಿತಿ ಬೆಳಕಿಗೆ ಬಂದಿದೆ. ಬಿದ್ರಹಳ್ಳಿ ಕೆಎಸ್‌ಆರ್‌ಟಿಸಿ ಡಿಪೋ ಎದುರು ಹಾಗೂ ಮೂಡಿಗೆರೆಯ ಹ್ಯಾಂಡ್‌ಪೋಸ್ಟ್ ಸಮೀಪ ಕೃಷಿ ಸಂಶೋಧನಾ ಕೇಂದ್ರ ಮತ್ತು ಆರ್ಟಿಕಲ್ಚರ್ ಕಾಲೇಜು ಪ್ರದೇಶದಲ್ಲಿ ಅಕ್ರಮವಾಗಿ ಕಸ ಹಾಕಲಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಮಾರ್ಗವು ಪ್ರವಾಸೋದ್ಯಮದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿದ್ದು, ಪ್ರತಿದಿನ ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ಸಂಚರಿಸುತ್ತಾರೆ. ಆದರೆ ರಸ್ತೆ ಪಕ್ಕದಲ್ಲೇ ಕಸದ ದುರ್ವಾಸನೆ ಹರಡುವುದರಿಂದ ಪ್ರಯಾಣಿಕರು ಮೂಗಿಗೆ ರುಮಾಲು ಹಿಡಿದು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಥಳೀಯರ ಹೇಳಿಕೆಯ ಪ್ರಕಾರ, ಕಸದ ಸಂಗ್ರಹಣೆ ವ್ಯವಸ್ಥೆ ಇದ್ದರೂ, ಕೆಲವರು ತಮ್ಮ ಮನೆಯ ಕಸವನ್ನು ಸರಿಯಾಗಿ ನೀಡದೇ ರಾತ್ರಿ ವೇಳೆ ರಸ್ತೆ ಪಕ್ಕಕ್ಕೆ ತಂದು ಬಿಸಾಡುತ್ತಿರುವುದು ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಮನೆ ಸ್ವಚ್ಛತೆಯನ್ನು ಹೇಗೆ ಕಾಪಾಡುತ್ತೇವೋ ಅದೇ ರೀತಿಯಲ್ಲಿ ನಮ್ಮ ಊರಿನ ಸ್ವಚ್ಛತೆಯನ್ನೂ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂಬುದನ್ನು ಸ್ಥಳೀಯರು ಅರಿತುಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಗ್ರಾಮದ ಸ್ವಚ್ಛತೆ ಕಾಪಾಡುವುದು ಕೇವಲ ಆಡಳಿತದ ಹೊಣೆಗಾರಿಕೆ ಮಾತ್ರವಲ್ಲ, ಅದು ಸ್ಥಳೀಯರ ಸಹಭಾಗಿತ್ವದಿಂದಲೇ ಸಾಧ್ಯ. ಆದರೆ ಕೆಲವರ ನಿರ್ಲಕ್ಷ್ಯದಿಂದ ಗ್ರಾಮದೆಲ್ಲೆಡೆ ಕಸದ ರಾಶಿಗಳು ಕಾಣಿಸಿಕೊಳ್ಳುತ್ತಿದ್ದು, ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಮಳೆಗಾಲದಲ್ಲಿ ಈ ಕಸ ಇನ್ನಷ್ಟು ಹರಡಿ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುವ ಭೀತಿ ಇದೆ.
ಕೃಷಿ ಸಂಶೋಧನಾ ಕೇಂದ್ರ ಹಾಗೂ ಆರ್ಟಿಕಲ್ಚರ್ ಕಾಲೇಜು ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಇಂತಹ ಅಸ್ವಚ್ಛತೆ ಕಂಡುಬರುವುದು ವಿಷಾದನೀಯ ಸಂಗತಿಯಾಗಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೂ ಇದರಿಂದ ತೊಂದರೆ ಉಂಟಾಗಿದೆ.
Heap of garbage beside Bidrahalli National Highway
Share

Leave a comment

Leave a Reply

Your email address will not be published. Required fields are marked *

Don't Miss

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿ ಹೊಸ ಇತಿಹಾಸ ನಿರ್ಮಾಣಕ್ಕೆ ನಾಂದಿ ಹಾಡಿದ್ದಕ್ಕೆ ತಾಲೂಕು ಆಡಳಿತ ಸಾಕ್ಷಿಯಾಯಿತು....

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ ವಿದ್ಯಾರ್ಥಿ ಆಂದೋಲನವನ್ನು ನೆಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ತಿಳಿಸಿದರು....

Related Articles

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...

ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ. ಹರಿಪ್ರಸಾದ್ ದೂರು

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್...

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...