Home namma chikmagalur chikamagalur ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ
chikamagalurHomeLatest Newsnamma chikmagalur

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ

Share
Share

ಶೃಂಗೇರಿ: ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈಗ ಅತ್ಯಂತ ಮಹತ್ವದ ಆದೇಶವನ್ನು ಹೊರಡಿಸಿದೆ. ಅಂದು ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು.

ಈ ಅಲ್ಪ ಮತಗಳ ಅಂತರದ ಗೆಲುವಿನಲ್ಲಿ ಅಕ್ರಮ ನಡೆದಿದೆ ಮತ್ತು ಅಂಚೆ ಮತಗಳ ಎಣಿಕೆಯ ಸಂದರ್ಭದಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ ಡಿ.ಎನ್. ಜೀವರಾಜ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್, ಅಂಚೆ ಮತಗಳನ್ನು ಮರು ಎಣಿಕೆ ಮಾಡುವಂತೆ ಈಗ ಸ್ಪಷ್ಟ ನಿರ್ದೇಶನ ನೀಡಿದೆ. ಈ ಪ್ರಕರಣವು ಈ ಹಿಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತಾದರೂ, ಅಕ್ರಮಗಳ ಕುರಿತ ವಿಚಾರಣೆಯನ್ನು ಮುಂದುವರಿಸಲು ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿತ್ತು. ಅದರ ಬೆನ್ನಲ್ಲೇ ಈಗ ಮರು ಎಣಿಕೆಯ ಆದೇಶ ಬಂದಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ವಿಶೇಷವೆಂದರೆ, ಇದೇ ಮಾದರಿಯ ಮತ್ತೊಂದು ಪ್ರಕರಣ ಮಾಲೂರು ಕ್ಷೇತ್ರದಲ್ಲಿಯೂ ನಡೆದಿತ್ತು, ಅಲ್ಲಿಯೂ ಮರು ಎಣಿಕೆಗೆ ಆದೇಶಿಸಲಾಗಿತ್ತು. ಇದೀಗ ಶೃಂಗೇರಿ ಕ್ಷೇತ್ರದಲ್ಲಿ ಅಂಚೆ ಮತಗಳ ಮರು ಎಣಿಕೆಯ ನಂತರ ರಾಜಕೀಯ ಚಿತ್ರಣ ಬದಲಾಗಲಿದೆಯೇ ಅಥವಾ ರಾಜೇಗೌಡರ ಗೆಲುವು ಸುಭದ್ರವಾಗಿರಲಿದೆಯೇ ಎಂಬುದು ಇಡೀ ರಾಜ್ಯದ ಕುತೂಹಲಕ್ಕೆ ಕಾರಣವಾಗಿದೆ.

Recount of postal votes in Sringeri assembly constituency

Share

Leave a comment

Leave a Reply

Your email address will not be published. Required fields are marked *

Don't Miss

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿ ಹೊಸ ಇತಿಹಾಸ ನಿರ್ಮಾಣಕ್ಕೆ ನಾಂದಿ ಹಾಡಿದ್ದಕ್ಕೆ ತಾಲೂಕು ಆಡಳಿತ ಸಾಕ್ಷಿಯಾಯಿತು....

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ ವಿದ್ಯಾರ್ಥಿ ಆಂದೋಲನವನ್ನು ನೆಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ತಿಳಿಸಿದರು....

Related Articles

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...

ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ. ಹರಿಪ್ರಸಾದ್ ದೂರು

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್...

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...