Home namma chikmagalur chikamagalur ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಐಟಿ ಕಂಪನಿಯ ಉದ್ಯೋಗಿ
chikamagalurCrime NewsHomeLatest Newsnamma chikmagalur

ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಐಟಿ ಕಂಪನಿಯ ಉದ್ಯೋಗಿ

Share
Share

ಚಿಕ್ಕಮಗಳೂರು: ಸ್ನೇಹಿತನ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿಯೊಬ್ಬರು ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ದಾರುಣ ಘಟನೆ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮದ ಬಳಿ ನಡೆದಿದೆ.

ಮೃತಪಟ್ಟ ಯುವಕನನ್ನು ಗದಗ ಮೂಲದ ಅಭಿಷೇಕ್ (27) ಎಂದು ಗುರುತಿಸಲಾಗಿದೆ.

ಅಭಿಷೇಕ್ ತನ್ನ ಸ್ನೇಹಿತನ ಮದುವೆಗಾಗಿ ಸ್ನೇಹಿತರೊಂದಿಗೆ ಆಗಮಿಸಿದ್ದರು. ಅವರು ಬನ್ನೂರು ಗ್ರಾಮದ ಸಮೀಪದ ಹೋಂ ಸ್ಟೇ ಒಂದರಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಲು ಹೋದ ಅಭಿಷೇಕ್ ನೀರಿನಲ್ಲಿ ನಾಪತ್ತೆಯಾಗಿದ್ದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೀವ್ರ ಶೋಧ ನಡೆಸಿದರು. ಬನ್ನೂರು ಗ್ರಾಮದ ಸಮೀಪದ ನದಿಯಲ್ಲಿ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ.ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IT company employee drowns after going swimming in Bhadra river

Share

Leave a comment

Leave a Reply

Your email address will not be published. Required fields are marked *

Don't Miss

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿ ಹೊಸ ಇತಿಹಾಸ ನಿರ್ಮಾಣಕ್ಕೆ ನಾಂದಿ ಹಾಡಿದ್ದಕ್ಕೆ ತಾಲೂಕು ಆಡಳಿತ ಸಾಕ್ಷಿಯಾಯಿತು....

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ ವಿದ್ಯಾರ್ಥಿ ಆಂದೋಲನವನ್ನು ನೆಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ತಿಳಿಸಿದರು....

Related Articles

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...

ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ. ಹರಿಪ್ರಸಾದ್ ದೂರು

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್...

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...