Home namma chikmagalur chikamagalur ಏ.9 ರಿಂದ ಆದಿಚುಂಚನಗಿರಿ ಮಹಾ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ
chikamagalurHomeLatest Newsnamma chikmagalur

ಏ.9 ರಿಂದ ಆದಿಚುಂಚನಗಿರಿ ಮಹಾ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ

Share
Share

ಚಿಕ್ಕಮಗಳೂರು: ನಗರದ ಆದಿಚುಂಚನಗಿರಿ ಮಹಾ ವಿದ್ಯಾಲಯದಲ್ಲಿ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಆನ್ ಎಮರ್ಜಿಂಗ್ ರಿಸರ್ಚ್ ಇನ್ ಸ್ಮಾರ್ಟ್ ಎಲೆಕ್ಟ್ರಾನಿಕ್ಸ್ ಅಂಡ್ ಮಷಿನ್ ಇನ್ಫಾರ್ಮ್ಯಾಟಿಕ್ಸ್ ಎಂಬ ಅಂತರಾಷ್ಟ್ರೀಯ ಸಮ್ಮೇಳನವನ್ನು ಏ.೯ ಮತ್ತು ೧೦ ರಂದು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌತಮ್ ಎಂ.ಎ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮಿನಿಕೇಷನ್ ಬೆಂಗಳೂರು ಹಾಗೂ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಸೊಸೈಟಿ ಇವರುಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದು, ಬಾಲಗಂಗಾಧರನಾಥ ಸ್ವಾಮಿಗಳ ದಿವ್ಯಾಶೀರ್ವಾದ, ಡಾ. ನಿರ್ಮಲಾನಂದನಾಥ ಮಹಾ ಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶೃಂಗೇರಿ ಗುಣನಾಥ ಸ್ವಾಮಿಗಳ ಸಹಕಾರದೊಂದಿಗೆ ನಡೆಯಲಿದೆ ಎಂದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಡಾ. ಎಸ್. ಸೋಮನಾಥ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಡಾ. ಚೆಂಗಪ್ಪ ಮುಂಜಂದಿರ, ಡಾ. ಸುಮನಾ ಮರದಿತ್ಯ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆಂದು ಹೇಳಿದರು.

ಈ ಸಮ್ಮೇಳನದಲ್ಲಿ ಸಂಶೋಧಕರು, ಶಿಕ್ಷಕರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಸ್ಮಾರ್ಟ್ ಎಲೆಕ್ಟ್ರಾನಿಕ್ಸ್, ಇನ್ಫಾರ್ಮ್ಯಾಟಿಕ್ಸ್ ಮತ್ತು ಮಷಿನ್ ಇಂಟೆಲಿಜೆನ್ಸ್ ಈ ಮೂರು ಉದಯೋನ್ಮುಖ ಕ್ಷೇತ್ರಗಳಲ್ಲಿ ನವೀನ ವಿಚಾರಗಳು ಮತ್ತು ಸಂಶೋಧನಾ ಫಲಿತಾಂಶಗಳನ್ನು ಹಂಚಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ದೇಶ ಮತ್ತು ವಿದೇಶಗಳಿಂದ ೫೪೪ ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಬಂದಿದ್ದು, ಪ್ರಬಂಧಗಳ ಆಯ್ಕೆ ಪ್ರಕ್ರಿಯೆಗಳನ್ನು ಸಿಎಂಟಿ ಮೂಲಕ ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಸಿದ್ದು, ಮೌಲ್ಯಮಾಪನದ ನ್ಯಾಯತೆ ಮತ್ತು ಗುಣಮಟ್ಟವನ್ನು ಕಾಪಾಡಲು ಡಬಲ್ ಬ್ಲೈಂಡ್ ಪೀರ್ ರಿವ್ಯೂ ವಿಧಾನವನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆ. ವಿವರವಾದ ವಿಮರ್ಶೆಗೆ ಒಳಪಡಿಸಿ ೧೪೧ ಉತ್ತಮ ಗುಣಮಟ್ಟದ ಪ್ರಬಂಧವನ್ನು ಪ್ರಸ್ತುತಿಗೆ ಆಯ್ಕೆಮಾಡಲಾಗಿದ್ದು, ಈ ಪ್ರಕ್ರಿಯೆಯಲ್ಲಿ ತಜ್ಞ ವಿಮರ್ಶಕರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಈ ಸಮ್ಮೇಳನವು ಉನ್ನತ ಮಟ್ಟದ ಸಂಶೋಧನೆ ಮತ್ತು ನವೀನತೆ ಉತ್ತೇಜನ ನೀಡುವುದರ ಜೊತೆಗೆ ಶಿಕ್ಷಣ ಮತ್ತು ಉದ್ಯಮಗಳ ನಡುವಿನ ಸಹಕಾರವನ್ನು ಬಲಪಡಿಸುತ್ತದೆ. ಜ್ಞಾನ ಹಂಚಿಕೆ, ನೆಟ್‌ವರ್ಕಿಂಗ್ ವೇದಿಕೆ ಆಗುವುದರ ಮೂಲಕ ಯುವ ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಜೊತೆಗೆ ಜಾಗತಿಕ ತಾಂತ್ರಿಕ ಸಂಶೋಧನೆಯಲ್ಲಿ ಭಾರತ ಸ್ಥಾನವನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಸಂಘಟನಾಧ್ಯಕ್ಷರಾದ ಡಾ. ಸುಮ, ಪ್ರಕಾಶನ ಅಧ್ಯಕ್ಷ ಡಾ. ಅನಿಲ್‌ಕುಮಾರ್, ಪ್ರಾಧ್ಯಾಪಕರಾದ ಸಂಗಾರೆಡ್ಡಿ ಕುರ್ತಕೋಟಿ, ಮುಧುಪ್ರಕಾಶ್ ಉಪಸ್ಥಿತರಿದ್ದರು.

International conference at Adichunchanagiri Maha Vidyalaya from 9th April

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...