Home namma chikmagalur chikamagalur ಮಾಣಿಕ್ಯಧಾರ ಜಲಪಾತದ ಬಳಿ ಪ್ರವಾಸಿ ಮಹಿಳೆ ನಾಪತ್ತೆ
chikamagalurCrime NewsHomeLatest Newsnamma chikmagalur

ಮಾಣಿಕ್ಯಧಾರ ಜಲಪಾತದ ಬಳಿ ಪ್ರವಾಸಿ ಮಹಿಳೆ ನಾಪತ್ತೆ

Share
Share

ಚಿಕ್ಕಮಗಳೂರು: ಮಡಿಕೇರಿಯಲ್ಲಿ ಪ್ರವಾಸಿ ಮಹಿಳೆ ನಾಪತ್ತೆಯಾದ ಬೆನ್ನಲ್ಲೇ ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಇಂತಹದೇ ಒಂದು ಆತಂಕಕಾರಿ ಘಟನೆ ನಡೆದಿದೆ. ಕೇರಳದ ಪಾಲಕ್ಕಾಡ್ ಮೂಲದ ನಂದನಾ ಎಂಬ ಯುವತಿಯು ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಕೇರಳದಿಂದ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದ ಈ ಯುವತಿಯು ಮಂಗಳವಾರ ಸಂಜೆ 5:20ರ ಸುಮಾರಿಗೆ ತನ್ನ ಕುಟುಂಬ ಸದಸ್ಯರೊಡನೆ ಜಲಪಾತ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಗುಂಪಿನಿಂದ ಬೇರ್ಪಟ್ಟು ನಾಪತ್ತೆಯಾಗಿದ್ದಾಳೆ.

ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳೀಯರ ಸಹಾಯದೊಂದಿಗೆ ತೀವ್ರ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ.

ದಟ್ಟವಾದ ಅರಣ್ಯ ಮತ್ತು ಕಡಿದಾದ ಬೆಟ್ಟಗುಡ್ಡಗಳಿಂದ ಕೂಡಿದ ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುವುದು ಸವಾಲಾಗಿ ಪರಿಣಮಿಸಿದೆ. ಅದರಲ್ಲೂ ಪಶ್ಚಿಮ ಘಟ್ಟಗಳ ಮಂಜು ಮುಸುಕಿದ ವಾತಾವರಣ ಮತ್ತು ಕತ್ತಲು ಆವರಿಸುತ್ತಿರುವುದು ಶೋಧ ಕಾರ್ಯಕ್ಕೆ ಹೆಚ್ಚಿನ ಅಡ್ಡಿ ಉಂಟುಮಾಡುತ್ತಿದೆ.

ದತ್ತಪೀಠದ ಸಮೀಪವೇ ಇರುವ ಮಾಣಿಕ್ಯಧಾರದಲ್ಲಿ ಯುವತಿ ನಾಪತ್ತೆಯಾಗಿರುವುದು ಪ್ರವಾಸಿಗರಲ್ಲಿ ತೀವ್ರ ಆತಂಕ ಮೂಡಿಸಿದೆ. ಪ್ರಸ್ತುತ ಹುಡುಕಾಟ ಮುಂದುವರಿದಿದ್ದು ನಾಪತ್ತೆಯಾದ ನಂದನಾಳ ಕುಟುಂಬಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

Tourist woman goes missing near Manikyadhara waterfall

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ಮೊಟ್ಟೆ ವಿತರಣೆ

ಚಿಕ್ಕಮಗಳೂರು: ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ಇನ್ಮುಂದೆ ವಾರಕ್ಕೆ ಆರು ಮೊಟ್ಟೆಯಂತೆ ತಿಂಗಳಿಗೆ 25 ಮೊಟ್ಟೆ ವಿತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ...

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರಿನ ೧೫೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಚಿಕ್ಕಮಗಳೂರಿನ...

Related Articles

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ಸಿಗೆ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...

ಸಾರ್ವಜನಿಕ ಚರ್ಚೆ ಬಳಿಕ ಕ್ಷೇತ್ರಗಳ ಮರುವಿಂಗಡಣೆ ಸೂಕ್ತ

ಚಿಕ್ಕಮಗಳೂರು: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ಸಾರ್ವಜನಿಕ ಚರ್ಚೆ ಮತ್ತು ಸಮಾಲೋಚನೆ ಮಾಡಿದ ನಂತರವೇ ಜಾರಿ ಮಾಡಬೇಕು...

ನಾಪತ್ತೆಯಾದ ಯುವತಿಯ ರಕ್ಷಣಾ ಕಾರ್ಯಾಚರಣೆಗೆ ಸಚಿವರ ಸೂಚನೆ

ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ತೆರಳಿದ್ದ ಕೇರಳದ ಪಾಲಕಾಡ್ ಜಿಲ್ಲೆಯ...