Home namma chikmagalur chikamagalur ಆಕಸ್ಮಿಕ ಅಗ್ನಿ ಅವಘಡಕ್ಕೆ ಮೂರು ಪ್ರಾಣಿಗಳ ಸಜೀವ ದಹನ
chikamagalurHomeLatest Newsnamma chikmagalur

ಆಕಸ್ಮಿಕ ಅಗ್ನಿ ಅವಘಡಕ್ಕೆ ಮೂರು ಪ್ರಾಣಿಗಳ ಸಜೀವ ದಹನ

Share
Share

ಅಜ್ಜಂಪುರ: ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡವೊಂದು ಎರಡು ಕುಟುಂಬಗಳನ್ನು ಬೀದಿಗೆ ತಂದಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟದೊಂದಿಗೆ ಮೂರು ಮೂಕಪ್ರಾಣಿಗಳು ಜೀವಂತ ದಹನವಾಗಿರುವ ಘಟನೆ ಅಜ್ಜಂಪುರ ಸಮೀಪದ ಬೇಗೂರು ಗ್ರಾಮದಲ್ಲಿ ವರದಿಯಾಗಿದೆ.

ಗ್ರಾಮದ ನಿವಾಸಿಗಳಾದ ಲೋಕೇಶಪ್ಪ ಹಾಗೂ ಮಹಾಂತೇಶ್ ಎಂಬುವವರಿಗೆ ಸೇರಿದ ಶೆಡ್‌ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗಳನ್ನು ಆವರಿಸಿಕೊಂಡಿದೆ. ಈ ದುರ್ಘಟನೆಯಲ್ಲಿ ಕಣ್ಣೆದುರೇ ಮನೆಯಲ್ಲಿದ್ದ ಹಸುವಿನ ಒಂದು ಕರು ಹಾಗೂ ಎರಡು ಎಮ್ಮೆ ಕರುಗಳು ಬೆಂಕಿಗೆ ಆಹುತಿಯಾಗಿರುವುದು ಅಲ್ಲಿದ್ದವರ ಕರುಳು ಹಿಂಡುವಂತಿತ್ತು.

ಬೆಂಕಿಯ ಅಬ್ಬರ ಎಷ್ಟಿತ್ತೆಂದರೆ ಮನೆಯಲ್ಲಿದ್ದ ಒಂದು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ವರ್ಷವಿಡೀ ಕಷ್ಟಪಟ್ಟು ಬೆಳೆದು ಸಂಗ್ರಹಿಸಿಟ್ಟಿದ್ದ ಸುಮಾರು 30 ಚೀಲ ರಾಗಿ ಸೇರಿದಂತೆ ಎಲ್ಲಾ ದವಸ ಧಾನ್ಯಗಳು ಬೂದಿಯಾಗಿವೆ. ಅಷ್ಟೇ ಅಲ್ಲದೆ, ಮನೆಯಲ್ಲಿದ್ದ ಬೆಲೆಬಾಳುವ ಆಭರಣಗಳು ಹಾಗೂ ಪ್ರಮುಖ ದಾಖಲೆಗಳು ಬೆಂಕಿಗಾಹುತಿಯಾಗಿದ್ದು, ಎರಡು ಕುಟುಂಬಗಳು ಕಂಗಾಲಾಗಿವೆ. ಸ್ಥಳೀಯರು ಕೂಡಲೇ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಅಗ್ನಿಶಾಮಕ ದಳ ಸ್ಥಳಕ್ಕೆ ಬರುವಷ್ಟರಲ್ಲಿ ಎಲ್ಲವೂ ಸರ್ವನಾಶವಾಗಿತ್ತು.

ಈ ಘಟನೆಯಿಂದ ಅಜ್ಜಂಪುರ ಭಾಗದ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಹಾಗೂ ಬೇಸರ ವ್ಯಕ್ತವಾಗಿದೆ. ಅಜ್ಜಂಪುರ ವ್ಯಾಪ್ತಿಯಲ್ಲಿ ಒಂದು ಅಗ್ನಿಶಾಮಕ ಠಾಣೆ ಇದ್ದಿದ್ದರೆ ಇಷ್ಟೊಂದು ದೊಡ್ಡ ಮಟ್ಟದ ಅನಾಹುತವನ್ನು ತಪ್ಪಿಸಬಹುದಿತ್ತು ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ. ಪ್ರತಿ ಬಾರಿ ಇಂತಹ ಅವಘಡಗಳು ಸಂಭವಿಸಿದಾಗಲೂ ತರೀಕೆರೆಯಿಂದ ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿರುತ್ತೆ. ಹೀಗಾಗಿ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಅಜ್ಜಂಪುರಕ್ಕೆ ಪ್ರತ್ಯೇಕ ಅಗ್ನಿಶಾಮಕ ಠಾಣೆಯನ್ನು ಮಂಜೂರು ಮಾಡಬೇಕು ಎಂದು ಗ್ರಾಮಸ್ಥರು ಗಟ್ಟಿಯಾಗಿ ಒತ್ತಾಯಿಸಿದ್ದಾರೆ.

Three animals burnt alive in accidental fire

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...