Home namma chikmagalur chikamagalur ಯುವಕನ ಮೇಲೆ ತಂಡವೊಂದರ ಮಾರಣಾಂತಿಕ ಹಲ್ಲೆ
chikamagalurCrime NewsHomeLatest Newsnamma chikmagalur

ಯುವಕನ ಮೇಲೆ ತಂಡವೊಂದರ ಮಾರಣಾಂತಿಕ ಹಲ್ಲೆ

Share
Share

ಚಿಕ್ಕಮಗಳೂರು : ನ್ಯಾಯಾಲಯದ ವಿಚಾರಣೆ ಮುಗಿಸಿ ವಾಪಸಾಗುತ್ತಿದ್ದ ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ರಾಶಿಲ್ ಪಾಷ ಎಂದು ಗುರುತಿಸಲಾಗಿದ್ದು, ಏಳು ತಿಂಗಳ ಹಿಂದೆಯಷ್ಟೇ ಐಶಾ ನಿಬಾ ಖಾನ್ ಎಂಬುವವರನ್ನು ಮದುವೆಯಾಗಿದ್ದರು.

ಆದರೆ ವಿವಾಹವಾದ ಕೆಲವೇ ತಿಂಗಳಲ್ಲಿ ದಂಪತಿಗಳ ನಡುವೆ ವೈಮನಸ್ಸು ಉಂಟಾಗಿದ್ದರಿಂದ, ಪತ್ನಿ ಕಳೆದ ನಾಲ್ಕು ತಿಂಗಳಿನಿಂದ ಪತಿಯನ್ನು ಬಿಟ್ಟು ತವರು ಸೇರಿದ್ದರು. ಅಷ್ಟೇ ಅಲ್ಲದೆ ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ವಿಚ್ಛೇದನ ಮತ್ತು ಜೀವನಾಂಶ ಕೋರಿ ಪತ್ನಿಯು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ಪ್ರಕರಣದ ಕಾನೂನು ಹೋರಾಟದ ಭಾಗವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿ ರಾಶಿಲ್ ಪಾಷ ಮರಳಿ ಕೆಲಸಕ್ಕೆ ತೆರಳುತ್ತಿದ್ದಾಗ ನಗರದ ಜೈನ್ ಟೆಂಪಲ್ ಸಮೀಪ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಟೋರಿಕ್ಷಾದಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ರಾಶಿಲ್ ನನ್ನು ತಡೆದು ಏಕಾಏಕಿ ದಾಳಿ ನಡೆಸಿದ್ದಾರೆ.

ಹಲ್ಲೆಯ ಸಮಯದಲ್ಲಿ ಯುವಕನ ಬೈಕ್ ಕೂಡ ಸಂಪೂರ್ಣವಾಗಿ ಜಖಂಗೊಂಡಿದ್ದು ಈ ಹಲ್ಲೆಯನ್ನು ಪತ್ನಿಯ ಕುಟುಂಬಸ್ಥರೇ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಘಟನೆಯಿಂದ ಗಾಯಗೊಂಡಿರುವ ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ತನ್ನ ಮೇಲೆ ಅಟ್ಯಾಕ್ ಮಾಡಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.

A young man was fatally attacked by a gang

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...