Home namma chikmagalur chikamagalur ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ
chikamagalurHomeLatest Newsnamma chikmagalur

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

Share
Share

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು ಕನ್ನಡದ ಸಂಯೋಜಕ ಪ್ರತಿಭೆ ಎಂದು ವಿಮರ್ಶಕ, ಲೇಖಕ ಡಾ.ಎಚ್.ಎಸ್.ಸತ್ಯನಾರಾಯಣ ಹೇಳಿದರು.

ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನಡೆದ ಮೂರು ದಿನದ ಛಾಯಾಗ್ರಹಣ ಕಾರ್ಯಾಗಾರದಲ್ಲಿ ತೇಜಸ್ವಿಯವರ ಕ್ಯಾಮರಾ ಕಣ್ಣು ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ ಒಂದು ಸನ್ನಿವೇಶದ ಅರ್ಥಪೂರ್ಣತೆಗೆ ಅಗತ್ಯವಾದ ವಿಶಿಷ್ಟ ವಿವರಗಳನ್ನು ಗ್ರಹಿಸೋದನ್ನು ಪೋಟೋಗ್ರಫಿ ಹೇಳಿಕೊಡುತ್ತದೆ ಎಂದರು.

ವಿಸ್ತಾರವಾದ ಅಸ್ತವ್ಯಸ್ತವಾದ ಜಗತ್ತನ್ನು ಒಂದು ಚೌಕಟ್ಟಿನೊಳಗೆ ನೋಡುವುದನ್ನು ಪೋಟೋಗ್ರಫಿ ಕಲಿಸುತ್ತದೆ. ವಾಸ್ತವ ಜಗತ್ತಿನ ಸರ್ವೇಸಾಧಾರಣ ದೃಶ್ಯ ಚೌಕಟ್ಟಿನೊಳಗೆ ನೋಡಿದಾಗ ವಿಶಿಷ್ಠವಾಗಿ ಕಾಣುತ್ತದೆ ಎಂಬುದು ಛಾಯಾಗ್ರಾಹಣದ ಕುರಿತ ತೇಜಸ್ವಿ ಅವರ ಮಾತು ಎಂದರು.

ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಪ್ರದೀಪ್ ಕೆಂಜಿಗೆ ಮಾತನಾಡಿ, ತೇಜಸ್ವಿ ಪ್ರತಿಷ್ಠಾನದಲ್ಲಿ ತೇಜಸ್ವಿ ಅವರ ಆಸಕ್ತಿಯ ವಿಷಯಗಳ ಕುರಿತು ಕುತೂಹಲ ಆಸಕ್ತಿ ಮೂಡಿಸುವ ವಾತಾವರಣವನ್ನು ನಿರ್ಮಿಸುವತ್ತ ಹೆಚ್ಚು ಆದ್ಯತೆ ನೀಡಲಾಗಿದೆ ಎಂದರು.

ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗಳು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ಮಾತನಾಡಿ, ಪೋಟೋಗ್ರಫಿ ಕಾರ್ಯಾಗಾರವು ಛಾಯಾಗ್ರಹಣದಲ್ಲಿ ಆಸಕ್ತಿರುವವರಿಗೆ ಉಪಯುಕ್ತವಾಗಿದೆ. ಕ್ಯಾಮರಾ ಬಳಸುವ ಬಗೆ, ತಾಂತ್ರಿಕ ವಿವರಗಳು ಮುಂತಾದವುಗಳನ್ನು ತಿಳಿದುಕೊಳ್ಳಲು ಈ ಕಾರ್ಯಾಗಾರ ಉಪಯುಕ್ತವಾಗಿದೆ ಎಂದರು.

ತೇಜಸ್ವಿ ಒಡನಾಡಿ ಮತ್ತು ಕಲಾವಿದ ಬಾಪುದಿನೇಶ್, ಛಾಯಾಗ್ರಾಹಕ ಶಿವಕುಮಾರ್ ಹಿರೇಗೌಜ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಛಾಯಾಗ್ರಾಹಕರಾದ ಬೆಂಗಳೂರಿನ ಆನಂದ್‌ಕುಮಾರ್, ಹೊಸಪೇಟೆಯ ಪಂಪಯ್ಯ ಮಳೇಮಠ ಛಾಯಾಗ್ರಹಣ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಬೆಂಗಳೂರು, ಮೈಸೂರು, ಗದಗ, ತುಮಕೂರು, ಹುಬ್ಬಳ್ಳಿ ಮುಂತಾದ ಜಿಲ್ಲೆಗಳಿಂದ ಆಗಮಿಸಿದ್ದ ೨೫ ಶಿಬಿರಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಬೇಸಿಕ್ ಪೋಟೋಗ್ರಫಿ, ಲ್ಯಾಂಡ್‌ಸ್ಕೇಪ್ ಛಾಯಾಗ್ರಹಣ, ಕ್ಯಾಮರಾ ಬಳಕೆ ಸಂಯೋಜನೆ, ಪೋಟೋ ಎಡಿಟಿಂಗ್ ಕುರಿತು ತಿಳಿಸಿಕೊಡಲಾಯಿತು. ಸಂತೆಯ ಚಿತ್ರಣ, ಗ್ರಾಮೀಣ ಜೀವನದ ಛಾಯಾಗ್ರಹಣ, ಪ್ರಕೃತಿ ನಡಿಗೆ ನಡೆಯಿತು.

ಈ ಸಂದರ್ಭದಲ್ಲಿ ತೇಜಸ್ವಿ ಪ್ರತಿಷ್ಠಾನದ ತಾಂತ್ರಿಕ ಸಹಾಯಕ ಪ್ರಜ್ವಲ್, ಕೀಟ ತಜ್ಞ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸತೀಶ್ ತರುವೆ, ಸಂಗೀತಾ ತರುವೆ, ಸುದಿತ್, ಪೂರ್ಣೇಶ್ ಮುಂತಾದವರು ಇದ್ದರು.

Kannada composer talent Tejaswi

 

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ಮೊಟ್ಟೆ ವಿತರಣೆ

ಚಿಕ್ಕಮಗಳೂರು: ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ಇನ್ಮುಂದೆ ವಾರಕ್ಕೆ ಆರು ಮೊಟ್ಟೆಯಂತೆ ತಿಂಗಳಿಗೆ 25 ಮೊಟ್ಟೆ ವಿತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ...

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರಿನ ೧೫೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಚಿಕ್ಕಮಗಳೂರಿನ...

Related Articles

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ಸಿಗೆ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...

ಸಾರ್ವಜನಿಕ ಚರ್ಚೆ ಬಳಿಕ ಕ್ಷೇತ್ರಗಳ ಮರುವಿಂಗಡಣೆ ಸೂಕ್ತ

ಚಿಕ್ಕಮಗಳೂರು: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ಸಾರ್ವಜನಿಕ ಚರ್ಚೆ ಮತ್ತು ಸಮಾಲೋಚನೆ ಮಾಡಿದ ನಂತರವೇ ಜಾರಿ ಮಾಡಬೇಕು...

ನಾಪತ್ತೆಯಾದ ಯುವತಿಯ ರಕ್ಷಣಾ ಕಾರ್ಯಾಚರಣೆಗೆ ಸಚಿವರ ಸೂಚನೆ

ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ತೆರಳಿದ್ದ ಕೇರಳದ ಪಾಲಕಾಡ್ ಜಿಲ್ಲೆಯ...

ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಫೋನ್‌ಗಳ ಕಳವು

ಚಿಕ್ಕಮಗಳೂರು: ನಗರದಲ್ಲಿ ರಿಲಾಯನ್ಸ್ ಡಿಜಿಟಲ್ ಕಂಪನಿಯ ಗೃಹೋಪಯೋಗಿ ವಸ್ತುಗಳನ್ನು ವಿತರಿಸುವ ವಾಹನದಿಂದ ಲಕ್ಷಾಂತರ ರೂಪಾಯಿ ಮೌಲ್ಯದ...