Home namma chikmagalur chikamagalur ನಾಪತ್ತೆಯಾದ ತನ್ನ ಮಗಳನ್ನು ಯಾರೋ ಅಪಹರಿಸಿದ್ದಾರೆ
chikamagalurHomeLatest Newsnamma chikmagalur

ನಾಪತ್ತೆಯಾದ ತನ್ನ ಮಗಳನ್ನು ಯಾರೋ ಅಪಹರಿಸಿದ್ದಾರೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರ ಜಲಪಾತದ ಬಳಿ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಆಕೆಯ ಸುಳಿವು ಸಿಗದಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಕಣ್ಣೀರಿಡುತ್ತಾ ಮಾತನಾಡಿದ ಬಾಲಕಿಯ ತಾಯಿ ರೋಹಿಣಿ ತನ್ನ ಮಗಳನ್ನು ಯಾರೋ ಅಪಹರಿಸಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ತನ್ನ ಮಗಳು ಜಲಪಾತದ ಬಳಿ ಆಕಸ್ಮಿಕವಾಗಿ ಬಿದ್ದಿರಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಯಾರೋ ಅಪರಿಚಿತರು ಆಕೆಯನ್ನು ಗಮನಿಸಿ, ಮಗಳು ಒಬ್ಬಳೇ ಇದ್ದ ಸಮಯ ಸಾಧಿಸಿ ಮಾದಕ ದ್ರವ್ಯ ನೀಡಿ ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. ಹತ್ತು ವರ್ಷದ ನಂತರ ಮೊದಲ ಬಾರಿಗೆ ಈ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದ ಕುಟುಂಬಕ್ಕೆ ಈ ಘಟನೆ ಬರಸಿಡಿಲಿನಂತೆ ಎರಗಿದೆ.

ಶಿಕ್ಷಣದಲ್ಲಿ ಮುಂದಿದ್ದ ಮಗಳ ನಾಪತ್ತೆಯಿಂದ ಕಂಗಾಲಾಗಿರುವ ಪೋಷಕರು, ಹೇಗಾದರೂ ಮಾಡಿ ನನ್ನ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸರಲ್ಲಿ ಹಾಗೂ ಸಾರ್ವಜನಿಕರಲ್ಲಿ ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ.

Someone has kidnapped his missing daughter.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...