Home namma chikmagalur chikamagalur ಶ್ರೀನಂದಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..?
chikamagalurHomeLatest Newsnamma chikmagalur

ಶ್ರೀನಂದಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..?

Share
Share

ಚಿಕ್ಕಮಗಳೂರು:  ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (14) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ ವೇಳೆ ಆಕೆ ಆಕಸ್ಮಿಕವಾಗಿ ನಾಪತ್ತೆಯಾಗಿದ್ದಳು. ಬಳಿಕ ಹಿನ್ನೆಲೆಯಲ್ಲಿ ಕುಟುಂಬದವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ.

ಬಳಿಕ ಅರಣ್ಯ ಇಲಾಖೆ, ಪೊಲೀಸರು, ಸೇರಿದಂತೆ ಇತರೆ ರಕ್ಷಣಾ ತಂಡಗಳು ಸತತ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಇಂದು (ಏಪ್ರಿಲ್ 10) ಶ್ರೀನಂದಾ 2000 ಅಡಿ ಆಳದ ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆದ್ರೆ, ಶ್ರೀನಂದಾ ಅದು ಹೇಗೆ ಬಿದ್ದಿದ್ದಾಳೆ ಎನ್ನುವುದೇ ನಿಗೂಢವಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದ್ರೆ, ಇದೀಗ ತಂದೆ, ಪೊಲೀಸರ ಮುಂದೆ ಹೇಳಿರುವ ಅದೊಂದು ಹೇಳಿಕೆ ಶ್ರೀನಂದಾ ಸಾವಿನ ಬಗ್ಗೆ ಮತ್ತೊಂದು ಅನುಮಾನ ಮೂಡಿದ್ದು,  ತಂದೆ ಬೈದಿದ್ದಕ್ಕೆ ಶ್ರೀನಂದಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೂರು ದಿನಗಳ ಕಾಲ ನಿರಂತರ ಶೋಧ ಕಾರ್ಯಾಚರಣೆ ನಡೆದ ಬಳಿಕ, ಅರಿಶಿನಗುಪ್ಪೆ ಭಾಗದಿಂದ ಹೊರಟ ಶೋಧ ತಂಡಕ್ಕೆ ಸುಮಾರು ಮೂರ್ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಆಳವಾದ ಕಂದಕದ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಈ ಪ್ರಪಾತವು ಸುಮಾರು 2000 ಅಡಿ ಆಳವಿದೆ. ಅತ್ಯಂತ ದುರ್ಗಮ ಪ್ರದೇಶವಾಗಿರುವ ಕಾರಣ ಶವವನ್ನು ಹೊರತೆಗೆದು ಮೇಲೆ ಎತ್ತಿಕೊಂಡು ಬರುವ ಕಾರ್ಯವೂ ಸವಾಲಿನದ್ದಾಗಿತ್ತು. ಇನ್ನು ಶ್ರೀನಂದಾ ಮೃತದೇಹ ಪತ್ತೆಯಾದ ಬಳಿಕ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದ್ರೆ, ಇದೀಗ ತಂದೆ ರಮೇಶ್, ಮೊಬೈಲ್ ವಿಚಾರಕ್ಕೆ ಮಗಳಿಗೆ ಬೈದಿದ್ದ ಬಗ್ಗೆ ಪೊಲೀಸರ ಮುಂದೆ ಹೇಳಿದ್ದಾರೆ. ಇದರಿಂದ ಶ್ರೀನಂದಾ, ಮಾಣಿಕ್ಯಧಾರಾ ಪಾರ್ಕಿಂಗ್ ಸ್ಥಳದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ.

Suspected of Srinanda committing suicide..?
Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...