Home namma chikmagalur chikamagalur ಮನೆಯ ಬೀಗ ಮುರಿದು ನಗದು ಸೇರಿದಂತೆ ಚಿನ್ನಾಭರಣ ಕಳವು
chikamagalurCrime NewsHomeLatest Newsnamma chikmagalur

ಮನೆಯ ಬೀಗ ಮುರಿದು ನಗದು ಸೇರಿದಂತೆ ಚಿನ್ನಾಭರಣ ಕಳವು

Share
Share

ಚಿಕ್ಕಮಗಳೂರು: ಬೀಗ ಹಾಕಿದ ಮನೆಯನ್ನು ಗುರಿಯಾಗಿಸಿಕೊಂಡ ಖತರ್ನಾಕ್ ಕಳ್ಳರು, ಬರೊಬ್ಬರಿ 6.60 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣದೊಂದಿಗೆ ಪರಾರಿಯಾಗಿದ್ದಾರೆ. ಈ ಘಟನೆ ಮಂಗಳೂರಿಗೆ ಹೋಗಿದ್ದ ಕುಟುಂಬವೊಂದಕ್ಕೆ ಅಕ್ಷರಶಃ ಆಘಾತ ತಂದಿದೆ.

ಶುಹೇಬ್ ಅವರು ತಮ್ಮ ಕುಟುಂಬದೊಂದಿಗೆ ಮಂಗಳೂರಿಗೆ ತೆರಳಿದ್ದರು. ದಿನಾಂಕ 08.04.2026ರ ರಾತ್ರಿ 08:00 ಗಂಟೆಗೆ ಮನೆಗೆ ಬೀಗ ಹಾಕಿ ತೆರಳಿದ್ದ ಅವರು, 11.04.2026ರ ಸಂಜೆ ವಾಪಸ್ ಬಂದಾಗ ಮನೆ ಸಂಪೂರ್ಣವಾಗಿ ಕಳ್ಳರ ಪಾಲಾಗಿರುವುದು ಕಂಡುಬಂದಿದೆ. ಮನೆಯ ಗೇಟ್ ತೆರೆದಿದ್ದು, ಮುಂಭಾಗಿಲನ್ನು ಯಾವುದೋ ಭಾರವಾದ ಆಯುಥದಿಂದ ಮೀಟಿ ಮುರಿದಿರುವುದು ಸ್ಪಷ್ಟವಾಗಿತ್ತು.

ಮನೆಯೊಳಗೆ ಪ್ರವೇಶಿಸಿದಾಗ ದೃಶ್ಯ ಇನ್ನಷ್ಟು ಭಯಾನಕವಾಗಿತ್ತು. ಎರಡು ಬೆಡ್ ರೂಂಗಳಲ್ಲಿನ ಗಾಡೇಜ್ ಬೀರುಗಳನ್ನು ಅದೇ ರೀತಿ ಮೀಟಿ ಮುರಿದು, ಅವುಗಳಲ್ಲಿಟ್ಟಿದ್ದ ಹಣ ಹಾಗೂ ಬಂಗಾರದ ಒಡವೆಗಳನ್ನು ದೋಚಲಾಗಿತ್ತು.

ಆಸ್ಪತ್ರೆಗೆ ಹೋಗುವ ಮುನ್ನ ಅವರ ತಾಯಿಯವರು ಬೀರುವಿನಲ್ಲಿಟ್ಟಿದ್ದ ಸುಮಾರು 130 ಗ್ರಾಂ ತೂಕದ ಹಳೆಯ ಬಂಗಾರದ ಆಭರಣಗಳು (ಅಂದಾಜು ಮೌಲ್ಯ 2,60,000 ರೂ.) ಮತ್ತು 4 ಲಕ್ಷ ರೂಪಾಯಿ ನಗದು ಹಣ ಎಲ್ಲವೂ ಮಾಯವಾಗಿತ್ತು.

ಕಳುವಾದ ಒಟ್ಟು ಸ್ವತ್ತಿನ ಮೌಲ್ಯ 6,60,000/- ರೂ. ಎಂದು ಅಂದಾಜಿಸಲಾಗಿದ್ದು, ಈ ಸಂಬಂಧ ಬಸವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ.

ಕುಟುಂಬದವರು ಕಳೆದುಹೋದ ಚಿನ್ನ ಮತ್ತು ಹಣವನ್ನು ಪತ್ತೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

House locked cash and jewellery stolen

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...