Home namma chikmagalur chikamagalur ಕಾಂಗ್ರೆಸ್ ನಗರಸಭಾ ಸದಸ್ಯನಿಂದ ಸ್ಥಳೀಯ ನಿವಾಸಿ ಮೇಲೆ ಹಲ್ಲೆ
chikamagalurCrime NewsHomeLatest Newsnamma chikmagalur

ಕಾಂಗ್ರೆಸ್ ನಗರಸಭಾ ಸದಸ್ಯನಿಂದ ಸ್ಥಳೀಯ ನಿವಾಸಿ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು : ಕಾಫಿನಾಡಿನ ಕಾಂಗ್ರೆಸ್ ನಗರಸಭಾ ಸದಸ್ಯ ಸಾರ್ವಜನಿಕವಾಗಿ ದರ್ಪ ಮೆರೆದ ಘಟನೆ ವರದಿಯಾಗಿದೆ. ನಗರಸಭೆಯ 34ನೇ ವಾರ್ಡಿನ ಸದಸ್ಯ ಲಕ್ಷ್ಮಣ್ ಸ್ಥಳೀಯ ನಿವಾಸಿ ಚಂದ್ರಶೇಖರ್ ಎಂಬುವವರ ಮೇಲೆ ಬಡಿಗೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಲಾಗಿದೆ. ಸೈಟ್ ವಿಚಾರಕ್ಕೆ ಸಂಬಂಧಿಸಿದ ಭಿನ್ನಾಭಿಪ್ರಾಯ ಈ ಸಂಘರ್ಷಕ್ಕೆ ಕಾರಣ ಎನ್ನಲಾಗುತ್ತಿದ್ದು,

ವಿಶೇಷವೆಂದರೆ ಈ ಹಲ್ಲೆಯಲ್ಲಿ ಚಂದ್ರಶೇಖರ್ ಪತ್ನಿಯೂ ಲಕ್ಷ್ಮಣ್ ಅವರಿಗೆ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಡು ರಸ್ತೆಯಲ್ಲೇ ರೌಡಿಗಳಂತೆ ವರ್ತಿಸಿದ ಕೌನ್ಸಿಲರ್, ಚಂದ್ರಶೇಖರ್ ಮೇಲೆ ಕಾರು ಹತ್ತಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ದೂರು ಕೇಳಿ ಬಂದಿದೆ..

ಘಟನೆಯಿಂದ ಗಾಯಗೊಂಡ ಚಂದ್ರಶೇಖರ್ ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದೃಶ್ಯಗಳನ್ನು ಕಂಡ ಸ್ಥಳೀಯರು, “ನಾವು ಓಟು ಹಾಕಿ ಗೆಲ್ಲಿಸಿದ್ದು ಇವರಿಂದ ಪೆಟ್ಟು ತಿನ್ನಲಕ್ಕಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Congress municipal council member assaults local resident

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...