Home namma chikmagalur chikamagalur ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
chikamagalurCrime NewsHomeLatest Newsnamma chikmagalur

ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು

Share
Share

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೂಡಿಗೆರೆ ಠಾಣಾ ವ್ಯಾಪ್ತಿಯ ಕುನ್ನಳ್ಳಿ ಗ್ರಾಮದ ವಿನೋದ್ (28) ಅವರು ಕೂಲಿ ಕೆಲಸ ಮುಗಿಸಿಕೊಂಡು ಸ್ನೇಹಿತ ರಮೇಶ್ ಜೊತೆ ಬೈಕ್‌ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಳಸೆ ದಿಕ್ಕಿನಿಂದ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಮತ್ತೊಂದು ಬೈಕ್ ವಿನೋದ್ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ವಿನೋದ್ ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರನ್ನು ಮೃತರಾಗಿದ್ದಾರೆಂದು ಘೋಷಿಸಿದ್ದಾರೆ. ಈ ಸಂಬಂಧ ಮೃತರ ತಂದೆ ಹರಿಶ್ಚಂದ್ರ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಘಟನೆ ಸಕ್ಕರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಳ್ಳೇನಹಳ್ಳಿಯ ತಿಮ್ಮಯ್ಯ ಅವರು ಸಕ್ಕರಾಯಪಟ್ಟಣದ ಪ್ಲೇಗಿನಮ್ಮ ದೇವಾಲಯದ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಚಿಕ್ಕಮಗಳೂರು ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡ ತಿಮ್ಮಯ್ಯ ಅವರನ್ನು ಮೊದಲಿಗೆ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರು ಮತ್ತು ಹಾಸನ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರ ಭಾವ ಸುರೇಶ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Two killed in separate accidents

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...