Home namma chikmagalur chikamagalur ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ 
chikamagalurHomeLatest Newsnamma chikmagalur

ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ 

Share
Share

ಚಿಕ್ಕಮಗಳೂರು:  ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದು 36 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆಯೂ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಇಂದು ಚಾಲನೆ ನೀಡಲಾಗಿದೆ. ವಿರೋಧಪಕ್ಷದವರು ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ , ಗ್ಯಾರಂಟಿಗಳ ನಂತರ ಖಜಾನೆ ಖಾಲಿಯಾಗಿವೆ, ಅಭಿವೃದ್ಧಿ ಶೂನ್ಯ ಎಂದು ಟೀಕಿಸುತ್ತಾರೆ. ಆದರೆ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನೂ ನಮ್ಮ ಸರ್ಕಾರ ಸಾಧ್ಯವಾಗಿಸಿದೆ ಎಂದರು.

ಸಮಸಮಾಜವನ್ನು ನಿರ್ಮಿಸುವುದೇ ಸಂವಿಧಾನದ ಆಶಯ

ಗ್ಯಾರಂಟಿಗಳೂ ಒಂದು ವಿಧದ ಅಭಿವೃದ್ಧಿಯಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ವಾತಂತ್ರ್ಯ ಅತ್ಯಗತ್ಯ ಎಂದಿದ್ದರು. ವಿರೋಧಪಕ್ಷದವರು ಅಂಬೇಡ್ಕರ್ ರವರ ಈ ಚಿಂತನೆಯ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದರು.

ಕೇಂದ್ರದಿಂದ ರಾಜ್ಯದ ಜನರಿಗೆ ಅನ್ಯಾಯ

ಮೈಸೂರು ಮಹಾರಾಜರಾಗಿದ್ದ ನರಸಿಂಹರಾಜ ಒಡೆಯರ್ ಅವರ ಕಾಲದಲ್ಲಿ ಎಡಳ್ಳಿಯಾಗಿದ್ದ ಈ ಪ್ರದೇಶಕ್ಕೆ ನರಸಿಂಹರಾಜಪುರ ಎಂದು ನಾಮಕರಣವಾಯಿತು. ಈ ಭಾಗದ ಅಭಿವೃದ್ಧಿಯ ಉದ್ದೇಶದಿಂದ ಇಲ್ಲಿನ ಶಾಸಕರ ಒತ್ತಾಸೆಯಿಂದ ಇಂದು ಸೇತುವೆ ನಿರ್ಮಾಣ ಸಾಧ್ಯವಾಗಿದೆ. ಉಳಿದಂತೆ ರಸ್ತೆ ಅಗಲೀಕರಣ, ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ, ಪ್ರವಾಸೋದ್ಯಮವೂ ಸೇರಿದಂತೆ ಹಲವು ಬೇಡಿಕೆಗಳ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು 2023-24 ರ ಆಯವ್ಯಯದಲ್ಲಿ 5300 ಕೋಟಿಗಳನ್ನು ಘೋಷಿಸಿತು. ಆದರೆ ಇದುವರೆಗೆ ಈ ಅನುದಾನ ನೀಡಿಲ್ಲ. ಈ ಮೂಲಕ ರಾಜ್ಯದ ಜನರಿಗೆ ಕೇಂದ್ರ ದ್ರೋಹವೆಸಗಿದೆ ಎಂದರು.

ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿ ಅನುಕರಿಸುತ್ತಿದೆ

ಕಾಂಗ್ರೆಸ್ ಸರ್ಕಾರವೊಂದೇ ಕೊಟ್ಟ ಮಾತಿನಂತೆ ನಡೆಯುವ ಸರ್ಕಾರವಾಗಿದೆ ಎಂದರು. ನಮ್ಮ ಸರ್ಕಾರದಿಂದ ಗ್ಯಾರಂಟಿಗಳಿಗೆ ಇದುವರೆಗೆ 1.30 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ರಾಜ್ಯದ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಯವರು ಇತರೆ ರಾಜ್ಯಗಳಲ್ಲಿ ಅವುಗಳನ್ನೇ ಅನುಸರಿಸುತ್ತಿದ್ದಾರೆ. ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದರು.

ರಾಜ್ಯದ ಆರ್ಥಿಕತೆ ಬಗ್ಗೆ ಬಿಜೆಪಿ ಅಪಪ್ರಚಾರ

ಕೇಂದ್ರದ ಜಿಡಿಪಿ ದರ 7.14 ರಷ್ಟಿದ್ದರೆ, ರಾಜ್ಯದ ಜಿಡಿಪಿ 8.1 ರಷ್ಟಿದೆ. ದೇಶದಲ್ಲಿ 53.11 ಲಕ್ಷ ಕೋಟಿಗಳಿದ್ದ ಸಾಲದ ಮೊತ್ತ, ಪ್ರಸ್ತುತ ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ 218 ಲಕ್ಷ ಕೋಟಿರೂ.ಗೆ ತಲುಪಿದೆ. ರಾಜ್ಯದ ಆರ್ಥಿಕ ಬೆಳವಣಿಗೆ ಕೇಂದ್ರಕ್ಕಿಂತ ಗಣನೀಯವಾಗಿ ಹೆಚ್ಚಿದೆ. ಕರ್ನಾಟಕದ ಆರ್ಥಿಕ ಸ್ಥಿತಿಯು ಸದೃಢವಾಗಿದ್ದು, ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳಿಗೆ ಪೂರಕವಾಗಿದೆ. ಆದರೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆದೇವರಾಗಿದೆ ಎಂದರು.

ನಮ್ಮ ಸರ್ಕಾರ ನುಡಿದಂತೆ ನಡೆದಿದೆ

ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರರವರು ರಾಜ್ಯದ ಆರ್ಥಿಕತೆ ವಸ್ತುಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಟೀಕಿಸಿದ್ದಾರೆ. ಅವರು ಬಜೆಟ್ ನ ಅಂಶಗಳ ಬಗ್ಗೆ ಮನನ ಮಾಡಿಕೊಳ್ಳದೇ, ಕೇವಲ ಪ್ರಚಾರಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. 15ನೇ ಹಣಕಾಸಿನ ಆಯೋಗದಲ್ಲಿ ಶಿಫಾರಸ್ಸು ಮಾಡಿದ್ದ ಅನುದಾನವನ್ನು ಕೇಂದ್ರ ನೀಡದೇ, ರಾಜ್ಯದ ಜನರಿಗೆ ಅನ್ಯಾಯ ಮಾಡಲಾಗಿದೆ. ಬಿಜೆಪಿಯ ಪ್ರಧಾನಿ ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಅವರ ಒಳ್ಳೆಯ ದಿನಗಳು ಬರಲೇ ಇಲ್ಲ. ಆದರೆ ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ, ನುಡಿದಂತೆ ನಡೆದಿದೆ. ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬಾರದು ಎಂದರು.

The state’s financial condition is better than that of the center.

Share

Leave a comment

Leave a Reply

Your email address will not be published. Required fields are marked *

Don't Miss

ಏ.9 ರಿಂದ ಆದಿಚುಂಚನಗಿರಿ ಮಹಾ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ

ಚಿಕ್ಕಮಗಳೂರು: ನಗರದ ಆದಿಚುಂಚನಗಿರಿ ಮಹಾ ವಿದ್ಯಾಲಯದಲ್ಲಿ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಆನ್ ಎಮರ್ಜಿಂಗ್ ರಿಸರ್ಚ್ ಇನ್ ಸ್ಮಾರ್ಟ್ ಎಲೆಕ್ಟ್ರಾನಿಕ್ಸ್ ಅಂಡ್ ಮಷಿನ್ ಇನ್ಫಾರ್ಮ್ಯಾಟಿಕ್ಸ್ ಎಂಬ ಅಂತರಾಷ್ಟ್ರೀಯ ಸಮ್ಮೇಳನವನ್ನು ಏ.೯ ಮತ್ತು ೧೦...

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಚಿಕ್ಕಮಗಳೂರು: ಕಮಲದ ಚಿಹ್ನೆಯಡಿ ಉದಯಿಸಿದ ಭಾಜಪ, ಜಗತ್ತಿನ ಎದುರು ದೇ ಶದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅನೇಕ ಸವಾಲು ಹಾಗೂ ಏಳುಬೀಳಿನ ನಡುವೆಯೂ ಎದೆ ಗುಂದದೇ ರಾಷ್ಟದ ಏಕೀಕರಣಕ್ಕೆ ದುಡಿಯುತ್ತಿದೆ ಎಂದು...

Related Articles

ಸಿಎಂ ಪತ್ನಿ ಜಿಲ್ಲೆಯ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ,...

ಟಾಟಾಏಸ್-ಬೈಕ್ ನಡುವೆ ಅಪಘಾತ:ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತರೀಕೆರೆ: ಟಾಟಾಏಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಿಂಬದಿ...

ದೇಗುಲ ಮನಸ್ಸು, ಮೈಯನ್ನು ಶುದ್ಧಗೊಳಿಸುವ ಕೇಂದ್ರ

ಚಿಕ್ಕಮಗಳೂರು:  ದೇಗುಲ ಮನಸ್ಸು ಮತ್ತು ಮೈಯನ್ನು ಶುದ್ಧಗೊಳಿಸುವ ಪವಿತ್ರ ಕೇಂ ದ್ರ. ಗರ್ಭಗುಡಿಯಲ್ಲಿ ಭಗವಂತನು ನೆಲೆಸಿರುವಂತೆ,...

ಭದ್ರಾ ಹಿನ್ನೀರಿನ ಸಿದ್ದರಾಮಯ್ಯ ಸೇತುವೆ ಲೋಕಾರ್ಪಣೆ

ಚಿಕ್ಕಮಗಳೂರು:  ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದವರಿಗೆ ನಮ್ಮ ಸಾಧನೆಯೇ ಉತ್ತರವಾಗಿದ್ದು, ಕೇಂದ್ರ ಸರ್ಕಾರಕ್ಕಿಂತಲೂ...