Home namma chikmagalur chikamagalur ನರ್ಸ್‌ನಿಂದ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ರೀಲ್ಸ್ ವೀಕ್ಷಣೆ
chikamagalurHomeLatest Newsnamma chikmagalur

ನರ್ಸ್‌ನಿಂದ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ರೀಲ್ಸ್ ವೀಕ್ಷಣೆ

Share
Share

ಎನ್.ಆರ್.ಪುರ : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರವೀಗ ರೀಲ್ಸ್ ಅಡ್ಡವಾಗಿ ಮಾರ್ಪಟ್ಟಿದೆ. ರೋಗಿಗಳ ಸೇವೆಯಲ್ಲಿ ನಿರತರಾಗಬೇಕಿದ್ದ ನರ್ಸ್‌ಗಳು ಆಸ್ಪತ್ರೆಯ ಬೆಡ್ ಗಳ ಮೇಲೆಯೇ ಮಲಗಿ ಮೊಬೈಲ್‌ನಲ್ಲಿ ರೀಲ್ಸ್ ನೋಡುವುದರಲ್ಲಿ ಮಗ್ನರಾಗಿರುವ ಆಘಾತಕಾರಿ ದೃಶ್ಯಗಳು ಬೆಳಕಿಗೆ ಬಂದಿವೆ.

ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳು ನೋವಿನಿಂದ ನರಳುತ್ತಿದ್ದರೂ, ಅದಾವುದರ ಪರಿವೆಯಿಲ್ಲದ ನರ್ಸ್‌ಗಳು ತಮ್ಮದೇ ಲೋಕದಲ್ಲಿ ಮುಳುಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿನ ಸಿಬ್ಬಂದಿ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಒಂದೆರಡಲ್ಲ. ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳುವ ನರ್ಸ್‌ಗಳು ಮತ್ತೆ ಆಸ್ಪತ್ರೆಯ ಕಡೆಗೆ ಮುಖ ಮಾಡುವುದೇ ಅಪರೂಪ ಎಂಬ ದೂರಿದೆ. ಒಂದು ವೇಳೆ ಕೆಲಸಕ್ಕೆ ಬಂದರೂ ವೈದ್ಯರ ಅನುಪಸ್ಥಿತಿಯಲ್ಲಿ ರೀಲ್ಸ್ ನೋಡುವುದನ್ನೇ ತಮ್ಮ ಮುಖ್ಯ ಕರ್ತವ್ಯವಾಗಿಸಿಕೊಂಡಿದ್ದಾರೆ.

ಚಿಕಿತ್ಸೆಗಾಗಿ ರೋಗಿಗಳು ದಾವಿಸಿದರೆ, ಕನಿಷ್ಠ ಸೌಜನ್ಯವೂ ಇಲ್ಲದೆ “ಡಾಕ್ಟರ್ ಬರ್ತಾರೆ, ಅಲ್ಲಿಯವರೆಗೆ ಸುಮ್ಮನೆ ಕುಳಿತುಕೊಳ್ಳಿ” ಎಂದು ಗದರಿಸುವ ಪ್ರವೃತ್ತಿ ಬೆಳೆದಿದೆ. ಇನ್ನು ಕೆಲವೊಮ್ಮೆ ಬೇಜವಾಬ್ದಾರಿಯ ಪರಮಾವಧಿ ಎಂಬಂತೆ, ಮೊಬೈಲ್ ನೋಡುತ್ತಲೇ ಪಕ್ಕದಲ್ಲಿರುವ ಮತ್ತೊಬ್ಬ ನರ್ಸ್ ಬಳಿ ಹೋಗುವಂತೆ ರೋಗಿಗಳನ್ನು ಅಲೆದಾಡಿಸುತ್ತಿದ್ದಾರೆ ಎನ್ನಲಾಗಿದೆ.

ವೈದ್ಯರ ನಿರ್ಲಕ್ಷ್ಯ ಮತ್ತು ನರ್ಸ್‌ಗಳ ಈ ಅತಿಯಾದ ಮೊಬೈಲ್ ವ್ಯಾಮೋಹದಿಂದಾಗಿ ಬಡ ರೋಗಿಗಳು ಹೈರಾಣಾಗಿದ್ದಾರೆ. ನರ್ಸ್ ಒಬ್ಬರು ಬೆಡ್ ಮೇಲೆ ಮಲಗಿ ಆರಾಮವಾಗಿ ರೀಲ್ಸ್ ವೀಕ್ಷಿಸುತ್ತಿರುವ ದೃಶ್ಯವನ್ನು ರೋಗಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಇಂತಹ ಸಿಬ್ಬಂದಿಗಳ ವಿರುದ್ಧ ಜಿಲ್ಲಾ ಆರೋಗ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Watching reels while lying on a hospital bed by a nurse

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...