Home namma chikmagalur chikamagalur ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಪ್ರತಿಭಟನೆ
chikamagalurHomeLatest Newsnamma chikmagalur

ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಪ್ರತಿಭಟನೆ

Share
Share

ಚಿಕ್ಕಮಗಳೂರು: ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಂಸತ್ ಸದಸ್ಯರ ಕಚೇರಿ ಮತ್ತು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಹೇಶ್ ತಿಳಿಸಿದರು.

ಜಿಲ್ಲಾ ಕಾಫಿ ಬೆಳೆಗಾರರ ಸಂಘ, ಜಿಲ್ಲಾ ಸಣ್ಣ ಬೆಳೆಗಾರರ ಸಂಘ, ಜಿಲ್ಲಾ ಬೆಳೆಗಾರರ ಹಿತ ರಕ್ಷಣಾ ಸಮಿತಿ ಸಹಯೋಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾಫಿ ಬೆಳೆಗಾರರ ಸಾಲ ವಸೂಲಾತಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರ್ಫೇಸಿ ಕಾಯ್ದೆಯು ಬೆಳೆಗಾರರ ಕೊರಳಿಗೆ ಉರುಳಾಗಿದೆ. ಈಗಾಗಲೇ ಬೆಳೆಗಾರರು ಅನೇಕ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ. ರಸಗೊಬ್ಬರ, ಕ್ರಿಮಿನಾಶಕಗಳ ಬೆಲೆ ಏರಿಕೆ, ಕಾರ್ಮಿಕರ ಕೊರತೆ, ಪ್ರಕೃತಿ ವೈಪರೀತ್ಯಗಳ ಮಧ್ಯೆ ಸಿಲುಕಿ ಹೊರ ಬರಲಾಗದೆ ಬೆಳೆಗಾರರು ಕಂಗಾಲಾಗಿದ್ದಾರೆ ಎಂದರು.

ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಬೆಳೆ ಹಾನಿ ಜೀವ ಹಾನಿಯ ಪ್ರಮಾಣಗಳು ಏರಿಕೆಯಾಗುತ್ತಿವೆ. ಜೀವಹಾನಿ ಹಾಗೂ ಕಾಡುಪ್ರಾಣಿಗಳ ಹಾವಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈವರೆಗೂ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ ಎಂದು ದೂರಿದರು.

ಈ ಎಲ್ಲಾ ಸಮಸ್ಯೆಗಳ ನಡುವೆ ಸರ್ವೇಸಿ ಕಾಯ್ದೆ ಬಳಸಿಕೊಂಡು ಕಾಫಿ ತೋಟಗಳನ್ನು ಆನ್‌ಲೈನ್ ಮೂಲಕ ಹರಾಜು ಮಾಡುವ ಪ್ರಕ್ರಿಯೆಯನ್ನು ಬ್ಯಾಂಕ್‌ಗಳು ಮುಂದುವರೆಸಿವೆ ಎಂದರು.

ಜಿಲ್ಲೆಯಲ್ಲಿ ಏಳು ಬೆಳೆಗಾರರ ಕಾಫಿ ತೋಟಗಳನ್ನು ಆನ್‌ಲೈನ್ ಮೂಲಕ ಹರಾಜು ಮಾಡಲಾಗಿದೆ. ಹಲವರಿಗೆ ನೋಟಿಸ್ ನೀಡಲಾಗಿದೆ. ಕರ್ನಾಟಕ ಬೆಳೆಗಾರರ ಸಂಘಟನೆಗಳು ಈಗಾಗಲೇ ಮೂಡಿಗೆರೆ ಮತ್ತು ಮಂಗಳೂರು ಬ್ಯಾಂಕ್ ಕಚೇರಿಗಳ ಎದುರು ಧರಣಿ ನಡೆಸಿವೆ. ಆದರೂ ಬ್ಯಾಂಕುಗಳು ಬೆಳೆಗಾರರ ಮನವಿಗೆ ಮಣಿದಿಲ್ಲ. ಬೆಳೆಗಾರರ ಒಕ್ಕೂಟದ ಸದಸ್ಯರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಹೋಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದಾರೆ. ಬೆಳೆಗಾರರ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಜಾಣ ಮೌನ ವಹಿಸಿದೆ ಎಂದು ದೂರಿದರು.

ಆನ್‌ಲೈನ್‌ ಹರಾಜು ಪ್ರಕ್ರಿಯೆ ನಿಲ್ಲಿಸಬೇಕು, ಸರ್ಫೇಸಿ ಕಾಯ್ದೆಯಿಂದ ಕಾಫಿ ಬೆಳೆಯನ್ನು ಹೊರಗಿಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಎಂ.ಸಿ. ಬಸವರಾಜ್, ಜಿಲ್ಲಾ ಖಜಾಂಚಿ ಕುಮಾರಸ್ವಾಮಿ, ಮುಖಂಡರಾದ ಗುರುಶಾಂತಪ್ಪ, ಪ್ರದೀಪ್ ಭಾಗವಹಿಸಿ ದ್ದರು.

Protest against the SARFAESI Act on April 22

Share

Leave a comment

Leave a Reply

Your email address will not be published. Required fields are marked *

Don't Miss

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಚಿನ್ನದ ಸರ ಕನ್ನತನ

ಚಿಕ್ಕಮಗಳೂರು: ಸಂಭ್ರಮದಿಂದ ಬಂಧುಗಳ ಮದುವೆ ಮುಗಿಸಿಕೊಂಡು ನೆಮ್ಮದಿಯಾಗಿ ಮನೆ ಕಡೆ ಹೆಜ್ಜೆ ಹಾಕುತ್ತಿದ್ದ ಮಹಿಳೆಯೊಬ್ಬರಿಗೆ ಮಾರ್ಗಮಧ್ಯದಲ್ಲೇ ಕಳ್ಳರು ಬಿಗ್ ಶಾಕ್ ನೀಡಿದ್ದಾರೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬೈಕ್‌ನಲ್ಲಿ ಬಂದ...

ಹಾಡಹಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಮಾಂಗಲ್ಯ ಸರಗಳ್ಳತನ

ಚಿಕ್ಕಮಗಳೂರು: ಮನೆಯವರೊಂದಿಗೆ ನಗುನಗುತ್ತಾ ಸೀಮಂತ ಕಾರ್ಯಕ್ರಮಕ್ಕೆ ಹೆಜ್ಜೆ ಹಾಕುತ್ತಿದ್ದ ವೃದ್ಧೆಯೊಬ್ಬರ ಮೇಲೆ ಕಣ್ಣಿಟ್ಟ ಖದೀಮರು ಹಾಡಹಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ....

Related Articles

ಚುನಾವಣಾ ಆಯೋಗದ ವಿರುದ್ಧ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಜವಾಬ್ದಾರಿಯುತ ನಡೆ ಅಗತ್ಯ

ಚಿಕ್ಕಮಗಳೂರು: ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳು ಮತ್ತು ಟೀಕೆಗಳು...

ಮತದಾರರ ಮತಪಟ್ಟಿಯಿಂದ ಹೊರಗಿಡುವವರ ವಿರುದ್ಧ ಕ್ರಮ ಕೈಗೊಳ್ಳಿ

ಚಿಕ್ಕಮಗಳೂರು: ಮತದಾರರ ಪಟ್ಟಿಯಿಂದ ಮತದಾರರನ್ನು ಕೈ ಬಿಡುವ ಚಟುವಟಿಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ನಡೆಯುತ್ತಿದ್ದು, ಇಂಥ ದು?ತ್ಯ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ-ನಗದು ಕಳವು

ಕೊಪ್ಪ: ಮನೆ ಮಾಲೀಕರು ಇಲ್ಲದ ಸಮಯ ನೋಡಿ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ...

ಮೊಬೈಲ್ ಫೋನ್ ಹೈಕ್‌ – ಲಕ್ಷಾಂತರ ರೂಪಾಯಿ ಹಣ ವಂಚನೆ

ಚಿಕ್ಕಮಗಳೂರು: ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಕಳೆದುಹೋದ ಮೊಬೈಲ್ ಫೋನ್ ದುರುಪಯೋಗಪಡಿಸಿಕೊಂಡು, ಬ್ಯಾಂಕ್ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ...