Home namma chikmagalur chikamagalur ವೃದ್ಧರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚನೆ
chikamagalurCrime NewsHomeLatest Newsnamma chikmagalur

ವೃದ್ಧರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚನೆ

Share
Share

ಚಿಕ್ಕಮಗಳೂರು: ಎಪಿಕೆ (APK) ಫೈಲ್ ಬಳಸಿ ವೃದ್ಧರೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

ನಗರದ ಹೊಸಮನೆ ರಸ್ತೆಯ ನಿವಾಸಿ, ಲೋಕೋಪಯೋಗಿ ಇಲಾಖೆಯ (PWD) ನಿವೃತ್ತ ಇಂಜಿನಿಯರ್ ಆಗಿರುವ 84 ವರ್ಷದ ವೃದ್ಧರೊಬ್ಬರು ಈ ವಂಚನೆಗೆ ಒಳಗಾದವರು.

ಇವರು ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದು, ಅದರಲ್ಲಿ ತಮ್ಮ ನಿವೃತ್ತಿ ವೇತನದ ಹಣವನ್ನು ಇರಿಸಿದ್ದರು. ವಂಚಕರು ಆನಂದ್ ಅವರ ಮೊಬೈಲ್‌ಗೆ ತಿಳಿಯದಂತೆ ಯಾವುದೋ ಸಮಯದಲ್ಲಿ ಎಪಿಕೆ ಫೈಲ್ ಒಂದನ್ನು ಡೌನ್‌ಲೋಡ್ ಮಾಡಿಸಿದ್ದರು.

ಈ ಫೈಲ್ ಮೂಲಕ ಮೊಬೈಲ್ ಮೇಲೆ ನಿಯಂತ್ರಣ ಸಾಧಿಸಿದ ಕಿಡಿಗೇಡಿಗಳು, ಮಾರ್ಚ್ 23 ರಿಂದ ಏಪ್ರಿಲ್ 3ರ ನಡುವೆ ಹಂತ ಹಂತವಾಗಿ ಹಣವನ್ನು ವರ್ಗಾಯಿಸಿದ್ದಾರೆ. ಕಾರ್ತಿಕ್ ಎಂಬ ಹೆಸರಿನ ವ್ಯಕ್ತಿಯ ಖಾತೆಗೆ ಐಪಿಓಎಸ್ (IPOS) ಮೂಲಕ ಒಟ್ಟು 2,98,500 ರೂಪಾಯಿಗಳನ್ನು ಆನಂದ್‌ ಅವರಿಗೆ ತಿಳಿಯದಂತೆ ವರ್ಗಾವಣೆ ಮಾಡಿಕೊಳ್ಳಲಾಗಿದೆ.

ಬಳಿಕ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಆನಂದ್ ಅವರಿಗೆ ಈ ಮಹಾ ವಂಚನೆಯ ವಿಷಯ ತಿಳಿದುಬಂದಿದೆ. ಈ ಕುರಿತು ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನಿವೃತ್ತಿ ಜೀವನದ ಉಳಿತಾಯದ ಹಣವನ್ನು ಕಳೆದುಕೊಂಡಿರುವ ಆನಂದ್ ಅವರು, ವಂಚಕರನ್ನು ಪತ್ತೆ ಹಚ್ಚಿ ತಮಗೆ ಹಣ ವಾಪಸ್ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. ಸಾರ್ವಜನಿಕರು ಅಪರಿಚಿತ ಲಿಂಕ್‌ಗಳು ಅಥವಾ ಅಪ್‌ಗಳನ್ನು ಡೌನ್‌ಲೋಡ್ ಮಾಡುವಾಗ ಎಚ್ಚರದಿಂದಿರಬೇಕೆಂದು ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.

Fraud of lakhs of rupees from elderly’s bank account

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...