Home namma chikmagalur chikamagalur ಭದ್ರಾ ನದಿಯ ಹಿನ್ನೀರಿನಲ್ಲಿ ಯುವಕ ನಾಪತ್ತೆ
chikamagalurHomeLatest Newsnamma chikmagalur

ಭದ್ರಾ ನದಿಯ ಹಿನ್ನೀರಿನಲ್ಲಿ ಯುವಕ ನಾಪತ್ತೆ

Share
Share

ಎನ್. ಆರ್.ಪುರ ಭದ್ರಾ ನದಿಯ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ.

ನರಸಿಂಹರಾಜಪುರ ತಾಲೂಕಿನ ಸಿಗುವಾನಿ ಗ್ರಾಮದ ನಿವಾಸಿ 36 ವರ್ಷದ ನಿತಿನ್ ಎಂಬುವವರೇ ನೀರಿನಲ್ಲಿ ಮುಳುಗಿ ನಾಪತ್ತೆಯಾದ ದುರ್ದೈವಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಸೇತುವೆಯ ಕೆಳಭಾಗಕ್ಕೆ ಮೂವರು ಗೆಳೆಯರು ಸ್ನಾನಕ್ಕಾಗಿ ಹಾಗೂ ಈಜಲು ತೆರಳಿದ್ದರು.

ಈ ಪೈಕಿ ಇಬ್ಬರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದು, ನಿತಿನ್ ಅವರು ಮಾತ್ರ ಹೊರಬರಲಾರದೆ ನೀರಿನಲ್ಲಿ ಮುಳುಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನೂತನವಾಗಿ ನಿರ್ಮಿಸಿರುವ ಸಿದ್ದರಾಮಯ್ಯ ಸೇತುವೆಯನ್ನು ಕಳೆದ ಸೋಮವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು.

ನಾಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದು, ನಾಪತ್ತೆಯಾದ ವ್ಯಕ್ತಿಗಾಗಿ ತೀವ್ರ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Youth goes missing in Bhadra river backwaters

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...