Home namma chikmagalur chikamagalur ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು
chikamagalurCrime NewsHomeLatest Newsnamma chikmagalur

ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

Share
Share

ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಸಮೀಪದ ಹಾಗಲ ಗ್ರಾಮದಲ್ಲಿ ಸಂಭವಿಸಿದೆ.

27 ವರ್ಷದ ರಮೇಶ್ ಹಾಗೂ 36 ವರ್ಷದ ಮಹೇಶ್ ಮೃತ ದುರ್ದೈವಿಗಳು. ಇವರಿಬ್ಬರೂ ಶನಿವಾರ ಸಂಜೆ ಮೀನು ಹಿಡಿಯಲೆಂದು ಕೆರೆಗೆ ತೆರಳಿದ್ದು, ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಇಂದು ಬೆಳಿಗ್ಗೆ ಕೆರೆಯ ಬಳಿ ಶೋಧ ನಡೆಸಿದಾಗ ಅವರು ಕೆರೆಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿತ್ತು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಮೀನು ಹಿಡಿಯುವ ವೇಳೆ ಕಾಲು ಜಾರಿ ಕೆರೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಕುರಿತು ಅಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ನೀರಿನಲ್ಲಿ ಮುಳುಗಿ ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು,

ನರಸಿಂಹರಾಜಪುರ ತಾಲೂಕಿನ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ನಿತಿನ್ ಎಂಬುವವರು ಸಾವನ್ನಪ್ಪಿದ ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಒಟ್ಟು ಮೂವರು ನೀರು ಪಾಲಾಗಿದ್ದಾರೆ.

Two young men who had gone fishing fell into the water.

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...