Home namma chikmagalur chikamagalur ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ
chikamagalurHomeLatest Newsnamma chikmagalur

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ

Share
Share

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಹಾಗೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ಅವಾಂತರಗಳು ಸಂಭವಿಸಿವೆ. ಅದೃಷ್ಟವಶಾತ್ ಕೆಲವು ದೊಡ್ಡ ಅನಾಹುತಗಳು ಕೂದಲೆಳೆ ಅಂತರದಲ್ಲಿ ತಪ್ಪಿವೆ.

ಎನ್.ಆರ್.ಪುರ ತಾಲೂಕಿನ ಆಮ್ತಿ ಬಳಿ ಬಾಳೆಹೊನ್ನೂರಿನಿಂದ ಕೊಟ್ಟಿಗೆಹಾರಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ಮರ ಧರೆಗುರುಳಿದ್ದು, ರಸ್ತೆಯ ಎರಡೂ ಬದಿಗಳಲ್ಲೂ ಕಿಲೋಮೀಟರ್‌ಗಳಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಈ ವೇಳೆ ಕಾರಿನ ಮೇಲೆ ಬೀಳಬೇಕಿದ್ದ ಮರ ಜಸ್ಟ್ ಮಿಸ್ ಆಗಿದ್ದು, ಪ್ರವಾಸಿಗರ ಕಾರು ದೊಡ್ಡ ಅನಾಹುತದಿಂದ ಪಾರಾಗಿದೆ. ಸ್ಥಳೀಯರು ಮರ ತೆರವು ಕಾರ್ಯದಲ್ಲಿ ತೊಡಗಿಕೊಂಡರು.

ಇನ್ನೊಂದೆಡೆ, ಮಲೆನಾಡಿನ ಹಲವು ಭಾಗಗಳಲ್ಲಿ ಗಾಳಿ-ಮಳೆ ಅಬ್ಬರದಿಂದ ಜನರು ಬೆಚ್ಚಿಬಿದ್ದಿದ್ದಾರೆ. ಮೂಡಿಗೆರೆ ಹಾಗೂ ಕಳಸ ತಾಲೂಕುಗಳಲ್ಲಿ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಮಳೆ ಆಕಾಶದಿಂದ ಮಲ್ಲಿಗೆ ಹೂ ಸುರಿದಂತೆ ಕಾಣಿಸಿತು. ಕೆಲವೆಡೆ ಮಳೆ ನೀರು ರಸ್ತೆಗಳಲ್ಲಿ ಒಂದು ಅಡಿ ಎತ್ತರಕ್ಕೆ ಹರಿದಿದೆ.

ಭಾರೀ ಗಾಳಿಗೆ ಸಿಲ್ವರ್, ಅಡಿಕೆ ಹಾಗೂ ತೆಂಗಿನ ಮರಗಳು ಮುರಿದು ಬೀಳುವ ಸ್ಥಿತಿಗೆ ತಲುಪಿದ್ದು, ಕಳಸ ತಾಲೂಕಿನ ಕುದುರೆಮುಖ ಟಿಬಿ ಸರ್ಕಲ್‌ನಲ್ಲಿ ಮರ ಧರೆಗುರುಳಿದ ಘಟನೆ ವರದಿಯಾಗಿದೆ. ಕೆಲವು ಕಡೆಗಳಲ್ಲಿ ಮನೆಗಳ ಮೇಲ್ಛಾವಣಿ ಶೀಟ್‌ಗಳು ಭೂಮಿಯಿಂದ ನೂರು ಅಡಿ ಎತ್ತರಕ್ಕೆ ಹಾರಿ ಹೋಗಿರುವುದಾಗಿ ತಿಳಿದುಬಂದಿದೆ.

ಕೊಪ್ಪ ತಾಲೂಕಿನ ಗಾಳಿಗಂಡಿ ಗ್ರಾಮದಲ್ಲಿ ಭಾರೀ ಗಾಳಿಗೆ ಆರು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಸಿಮೆಂಟ್ ಶೀಟ್‌ಗಳು ಹಾಗೂ ಕಂಬಗಳು ಮುರಿದು ಬಿದ್ದಿವೆ. ಅಲ್ಲದೆ ಅಲಗೇಶ್ವರ ಗ್ರಾಮದಲ್ಲಿ ಬೃಹತ್ ಮರ ಮನೆ ಮೇಲೆ ಬಿದ್ದರೂ, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಸ್ಥಳಗಳಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮಲೆನಾಡು ಪ್ರದೇಶದಲ್ಲಿ ಮುಂದುವರಿಯುತ್ತಿರುವ ಗಾಳಿ-ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಆಡಳಿತವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಅಗತ್ಯತೆ ಎದುರಾಗಿದೆ.

Heavy wind and rain in the Malnad region

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...