Home namma chikmagalur chikamagalur ಮಾರುತಿ 800 ಕಾರೊಂದು ಆಕಸ್ಮಿಕವಾಗಿ ಬೆಂಕಿ
chikamagalurHomeLatest Newsnamma chikmagalur

ಮಾರುತಿ 800 ಕಾರೊಂದು ಆಕಸ್ಮಿಕವಾಗಿ ಬೆಂಕಿ

Share
Share

ಎನ್.ಆರ್.ಪುರ: ಮಾರುತಿ 800 ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್. ಪುರ ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ನಡೆದಿದೆ.

ಕಾಫಿ ತೋಟದ ಸೂಪರ್‌ವೈಸರ್ ಜಾರ್ಜ್ ಎಂಬುವರಿಗೆ ಸೇರಿದ ಈ ಕಾರು, ಕಾರ್ಮಿಕರನ್ನು ತೋಟಕ್ಕೆ ಬಿಟ್ಟು ಬಂದು ಮನೆ ಮುಂದೆ ನಿಲ್ಲಿಸಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ವಾಹನ ಧಗಧಗನೆ ಹೊತ್ತಿ ಉರಿದಿದೆ.

ಕಾರ್ಮಿಕರು ಕಾರಿನಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದರೆ ದೊಡ್ಡ ಮಟ್ಟದ ಪ್ರಾಣಾಪಾಯವಾಗುವ ಸಾಧ್ಯತೆಯಿತ್ತು, ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಮನೆ ಬಳಿ ನಿಲ್ಲಿಸಿದ ನಂತರವೇ ಬೆಂಕಿ ಹೊತ್ತಿಕೊಂಡಿದ್ದರಿಂದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

A Maruti 800 car accidentally caught fire

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...