Home namma chikmagalur chikamagalur ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು
chikamagalurCrime NewsHomeLatest Newsnamma chikmagalur

ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು

Share
Share

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ 13 ವರ್ಷದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ನಗರದ ದಂಟರಮಕ್ಕಿ ನಿವಾಸಿಯಾದ ಪೃಥ್ವಿರಾಜ್ ಮೃತಪಟ್ಟ ದುರ್ದೈವಿ ಬಾಲಕ. ಸಖರಾಯಪಟ್ಟಣ ಸಮೀಪವಿರುವ ಈ ಬೃಹತ್ ಕೆರೆಗೆ ಪೃಥ್ವಿರಾಜ್ ತನ್ನ ದೊಡ್ಡಮ್ಮ ಹಾಗೂ ನಾಲ್ವರು ಸ್ನೇಹಿತರ ಜೊತೆ ಸೇರಿ ಈಜಲು ಹೋಗಿದ್ದನು. ಐವರು ಬಾಲಕರು ಕೆರೆಯಲ್ಲಿ ಈಜುತ್ತಿದ್ದಾಗ ಆಕಸ್ಮಿಕವಾಗಿ ಪೃಥ್ವಿರಾಜ್‌ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಸಖರಾಯಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ನೀರಿನಲ್ಲಿ ಮುಳುಗಿ ಸಂಭವಿಸುತ್ತಿರುವ ಸಾವುಗಳು ಆತಂಕ ಮೂಡಿಸಿವೆ.

ಕಳೆದ ಶನಿವಾರ ಭದ್ರಾ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿದ್ದ ಬೆನ್ನಲ್ಲೇ, ಭಾನುವಾರ ಆಲ್ಲೂರು ಸಮೀಪ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಜೀವ ಕಳೆದುಕೊಂಡಿದ್ದರು.

ಈ ಘಟನೆಗಳ ಬೆನ್ನಲ್ಲೇ ಈಗ ಅಯ್ಯನಕೆರೆಯಲ್ಲಿ ಬಾಲಕ ಸಾವನ್ನಪ್ಪಿರುವುದು ಜಿಲ್ಲೆಯಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ ಒಟ್ಟು ನಾಲ್ವರು ಜಲಸಮಾಧಿಯಾದಂತಾಗಿದೆ.

A boy who went swimming in Ayyana Lake died.

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...