Home namma chikmagalur chikamagalur ಏ.23ಕ್ಕೆ ಕರಾಳಕೃತ್ಯ ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ
chikamagalurHomeLatest Newsnamma chikmagalur

ಏ.23ಕ್ಕೆ ಕರಾಳಕೃತ್ಯ ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

Share
Oplus_16908288
Share

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯದ ಅಪಚಾರ ಏಪ್ರಿಲ್ ೨೩ ರಂದು ಪಶ್ಚಿಮಬಂಗಾಳದಲ್ಲಿ ನಡೆಯುತ್ತಿದೆ. ಇದನ್ನು ವಿರೋಧಿಸಿ ಅದೇ ದಿನ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಎದ್ದೇಳು ಕರ್ನಾಟಕ ರಾಜ್ಯ ಸಂಚಾಲಕ ಗೌಸ್‌ಮೊಹಿಯುದ್ದೀನ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಮಾತನಾಡಿ, ಆ ರಾಜ್ಯದಲ್ಲಿ ಸುಮಾರು ಅರ್ಧಕೋಟಿ ಮತದಾರರ ಹಕ್ಕನ್ನು ಕಸಿದುಕೊಂಡು ಚುನಾವಣೆ ನಡೆಸಲಾಗುತ್ತಿದೆ.ಪ್ರಜಾತಂತ್ರ ಪ್ರೇಮಿಗಳ ಎದೆಗೆ ಇರಿದಂತಾಗಿದೆ. ಪಶ್ಚಿಮಬಂಗಾಳಕ್ಕೆ ಬಂದಿರುವ ಸ್ಥಿತಿ ಕರ್ನಾಟಕಕ್ಕೂ ಬರುವ ಸಾಧ್ಯತೆಗಳಿದ್ದು, ಈ ಕುರಿತು ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದರು.

ಸುಮಾರು ೧೩ ರಾಜ್ಯಗಳ ೬.೫ ಕೋಟಿ ಜನರ ಮತದಾನದಹಕ್ಕು ರದ್ದಾಗಿದೆ. ಇದು ಹಂತಹಂತವಾಗಿ ದೇಶದ ವಿದ್ಯಾಮಾನವಾಗಲಿದೆ. ಭಾರತದ ಪ್ರಜಾತಂತ್ರಕ್ಕೆ ಇಂಜೆಕ್ಷನ್ ಮೂಲಕ ವಿಷ ಉಣಿಸಲಾಗುತ್ತಿದೆ. ನಾವುಗಳ ಮೌನವಹಿಸುತ್ತಾ ಸಾಗಿದರೆ ಈ ದೇಶ ದೇಶವಾಗಿ ಉಳಿಯುವುದಿಲ್ಲ ಎಂದರು.

ಬೆಂಗಳೂರಿನಲ್ಲಿ ವಿವಿಧ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಏ ೨೩ರ ಕರಾಳ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.ಕರ್ನಾಟಕದಲ್ಲಿ ಎಸ್‌ಐಆರ್ ವಿರೋಧಿಸುತ್ತಿರುವ ಪ್ರಗತಿಪರ ಸಂಘಟನೆಗಳು, ಜಾತ್ಯತೀತ ಪಕ್ಷಗಳು ಒಗ್ಗೂಡಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ನಮಗೆ ನೀಡಿರುವ ಮತದಾನದ ಹಕ್ಕನ್ನು ಕಳೆದುಕೊಳ್ಳಲು ನಾವು ಇಚ್ಚಿಸುವುದಿಲ್ಲವೆಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಬಿ.ದಿವಾಕರ ಹೇಳಿದರು. ಏ ೨೩ ರಂದು ನಡೆಯುವ ಪ್ರತಿಭಟನೆಗೆ ಪ್ರಗತಿಪರರು ಕೈಜೋಡಿಸಬೇಕು.ಕರ್ನಾಟಕಕ್ಕೆ ಬರಲಿರುವ ಅಪಾಯವನ್ನು ತಡೆಯಬೇಕಾಗಿದೆ ಎಂದು ಹೇಳಿದರು. ಯುಸೂಫ್‌ಹಾಜಿ ಮನವಿ ಮಾಡಿದರು.

ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿ ಸಂಚಾಲಕ ಟಿ.ಎಲ್.ಗಣೇಶ್, ಮಹಿಳಾ ಘಟಕದ ಸಂಚಾಲಕರಾದ ಅರುಣಾಕ್ಷಿ, ರೀತು, ಮಹಮ್ಮದ್ ಅತಿಕ್ ಇದ್ದರು.

Protest at Freedom Park Bengaluru condemning the atrocities on April 23

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...