ಅಜ್ಜಂಪುರ : ಪಟ್ಟಣದ ಗಾಂಧಿ ಸರ್ಕಲ್ ಸಮೀಪದ ಬೀರೂರು ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.
ಮೆಕಾನಿಕ್ ಆನಂದ ಅವರ ವರ್ಕ್ಶಾಪ್ ಹಾಗೂ ಪಕ್ಕದಲ್ಲಿದ್ದ ಚಪ್ಪಲಿ ಗೂಡಂಗಡಿ ಅಂಗಡಿಗೆ ಬೆಂಕಿ ತಗುಲಿ, ಅಂಗಡಿಗಳಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯ ಪರಿಣಾಮವಾಗಿ ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಶಾರ್ಟ್ ಸರ್ಕ್ಯೂಟ್ ಅಥವಾ ಇತರೆ ಕಾರಣಗಳ ಬಗ್ಗೆ ತನಿಖೆ ನಡೆಯುತ್ತಿದೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದ್ದು, ಹೆಚ್ಚಿನ ನಷ್ಟ ತಪ್ಪಿಸಲು ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ದಳ ಸ್ಪಂದಿಸಿದುದು ಗಮನಾರ್ಹವಾಗಿದೆ.
Fire breaks out at shops in Ajjampura late at night – huge loss
Leave a comment