Home namma chikmagalur chikamagalur ಬಿರುಗಾಳಿ ಸಹಿತ ಸುರಿದ ಭಾರಿ ಮಳೆ
chikamagalurHomeLatest Newsnamma chikmagalur

ಬಿರುಗಾಳಿ ಸಹಿತ ಸುರಿದ ಭಾರಿ ಮಳೆ

Share
Share

ಆಲ್ಲೂರು: ಬಿರುಗಾಳಿ ಸಹಿತ ಸುರಿದ ಭಾರಿ ಮಳೆ ಆಲ್ಲೂರು ಸುತ್ತಮುತ್ತ ಅವಾಂತರ ಸೃಷ್ಟಿಸಿತು. ಬಿಸಿಲಿನಿಂದ ಕಂಗೆಟ್ಟಿದ್ದ ಜನ ಕೊಂಚ ಸಮಾಧಾನಗೊಂಡರೆ, ಹಲವರಿಗೆ ಮಳೆ ಭಾರಿ ನಷ್ಟ ತಂದಿದೆ.

ಬಿರುಗಾಳಿ ಸಹಿತ ಮಿಂಚು, ಗುಡುಗಿನ ರಭಸದೊಂದಿಗೆ ಆರಂಭವಾದ ಆಲಿಕಲ್ಲು ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು. ಮೇದರ ಬೀದಿ ಹಾಗೂ ರೈಸ್ ಮಿಲ್ ರಸ್ತೆಯ ವಾರ್ಡ್‌ಗಳಲ್ಲಿ ಹಲವು ಮನೆಗಳ ಚಾವಣಿ ಹಾನಿಯಾಗಿದೆ.

ಕೆಲ ಮನೆಯ ಹೆಂಚುಗಳ ಮೇಲೆ ಮರದ ಕೊಂಬೆಗಳು ಮುರಿದು ಬಿದ್ದು ಚಾವಣಿ ಜಖಂಗೊಂಡಿದೆ. ಸಿಮೆಂಟ್ ಶೀಟುಗಳು ಮತ್ತು ಮನೆ ಹಂಚುಗಳು ಗಾಳಿಯ ರಭಸಕ್ಕೆ ಹಾರಿ ಕೆಳಗೆ ಬಿದ್ದಿವೆ. ಬಿರಂಜಿ ಹೊಳೆಯ ಬಳಿ ಹಾದು ಹೋಗುವ ರಾಜ್ಯ ಹೆದ್ದಾರಿಯಲ್ಲಿ ಮರಗಳು ಮುರಿದು ಬಿದ್ದಿವೆ. 12 ವಿದ್ಯುತ್ ಕಂಬಗಳು ರಸ್ತೆ ಮೇಲೆ ಉರುಳಿದ್ದು ಕೆಲ ಕಾಲ ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿ ಸಂಪೂರ್ಣವಾಗಿ ಬಂದ್ ಆಗಿತ್ತು.

ಪಕ್ಕದಲ್ಲಿ ಇದ್ದ ಹೈಟೆಕ್ ಮೋಲ್ ಜೋನ್ ಎಂಬ ವೀಲ್ ಅಲೈನ್ನೆಂಟ್ ಶಾಪ್ ಚಾವಣಿಗೆ ಹಾಕಿದ್ದ ತಗಡಿನ ಶೀಟುಗಳು ಸುಮಾರು 200 ಮೀಟರ್ ದೂರಕ್ಕೆ ಹಾರಿ ಹೋಗಿವೆ. ಪೆಟ್ರೋಲ್ ಬಂಕ್ ಮಾಲಿಕ ಸಾರ್ಥಕ್ ಸಾಗರ್ ಅವರ ಮನೆ ಹಿಂಭಾಗ ನಿರ್ಮಿಸಿದ್ದ ಕುರಿ ಸಾಕಣೆಯ ಶೆಡ್ ಸಂಪೂರ್ಣ ಹಾನಿಯಾಗಿದೆ.

ರೈಸ್ ಮಿಲ್ ರಸ್ತೆಯ ಮನು, ಗ್ರಾಮ ಪಂಚಾಯತಿ ಮಾಜಿ ಸದಸ್ಯೆ ಲಕ್ಷ್ಮಿ ಮೇದರ ಬೀದಿ ನಿವಾಸಿ ಗಂಗಮ್ಮ ಹಾಗೂ ಇತರರ ಮನೆಗಳು ಹಾನಿಗೀಡಾಗಿವೆ. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಂಶೂನ್ ನಹರ್ ಹಾನಿಯಾದ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು.

ಮೆಸ್ಕಾಂ ಕಿರಿಯ ಸಹಾಯಕ ಎಂಜಿನಿಯರ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಿಬ್ಬಂದಿ ಹೆದ್ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ಕಂಬಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿದರು. ಪಿಎಸ್‌ಐ ರವಿ ಜಿ.ಎ ನೇತೃತ್ವದ ಪೊಲೀಸ್ ತಂಡ ಸಂಚಾರ ದಟ್ಟಣೆ ನಿರ್ವಹಿಸಿದರು.

ಶಂಕರ ಫಾಲ್ಸ್ ಬಳಿ ಎರಡು ಮರಗಳು ರಸ್ತೆಯ ಮೇಲೆ ಉರುಳಿ ಬಿದ್ದಿದ್ದು ಎರಡು ಗಂಟೆಗೂ ಹೆಚ್ಚಿನ ಸಮಯ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳೀಯರು, ವಾಹನ ಸವಾರರು ಸೇರಿ ಮರಗಳನ್ನು ತುಂಡರಿಸಿ ಸಂಚಾರ ಸುಗಮಗೊಳಿಸಿದರು ಎಂದು ಪ್ರತ್ಯಕ್ಷ ದರ್ಶಿ ಕೆ. ಮೂರ್ತಿ ಮಾಹಿತಿ ನೀಡಿದರು.

Heavy rain accompanied by storm

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...