Home namma chikmagalur chikamagalur ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ ಶಾಸಕಿ ನಯನಾ ಮೋಟಮ್ಮ
chikamagalurHomeLatest Newsnamma chikmagalur

ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ ಶಾಸಕಿ ನಯನಾ ಮೋಟಮ್ಮ

Share
Share

ಮೂಡಿಗೆರೆ: ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಅವರು ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ್ದಾರೆ.

ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಯುವಕರು ತೀವ್ರ ರಕ್ತಸ್ರಾವಕ್ಕೊಳಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು.

ಅದೇ ಸಮಯದಲ್ಲಿ ಹೊರನಾಡಿನಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಶಾಸಕಿ ನಯನಾ ಮೋಟಮ್ಮ ಅವರು ಅಪಘಾತವನ್ನು ಕಂಡು ಕೂಡಲೇ ವಾಹನ ನಿಲ್ಲಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು, ಕ್ಷಣವೂ ತಡಮಾಡದೆ ತಮ್ಮ ಅಂಗರಕ್ಷಕರ ಸಹಾಯದಿಂದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಹತ್ತಿಸಿಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ.

ಗಾಯಾಳುಗಳನ್ನು ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು. ಗಾಯಾಳುಗಳ ಮೈಯಿಂದ ಅತಿಯಾದ ರಕ್ತಸ್ರಾವವಾಗುತ್ತಿದ್ದ ಕಾರಣ ಶಾಸಕರ ಅಧಿಕೃತ ಕಾರು ಸಂಪೂರ್ಣ ರಕ್ತಮಯವಾಗಿತ್ತು. ಆದರೂ ಶಿಷ್ಟಾಚಾರ (Protocol) ಅಥವಾ ವಾಹನದ ಬಗ್ಗೆ ಯೋಚಿಸದೆ, ಜೀವ ಉಳಿಸುವುದೇ ಮುಖ್ಯ ಎಂದು ಶಾಸಕರು ತೋರಿದ ಈ ಕಾಳಜಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಕಷ್ಟದ ಸಮಯದಲ್ಲಿ ಶಾಸಕಿ ತೋರಿದ ಸಮಯಪ್ರಜ್ಞೆ ಮತ್ತು ಮಾನವೀಯ ಗುಣಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

MLA Nayana Motamma showed humanity by being punctual

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...