Home namma chikmagalur chikamagalur ಚಾರ್ಮಾಡಿ ಘಾಟಿಯಲ್ಲಿ ಎರಡು ವಾಹನಗಳು ಪಲ್ಟಿ
chikamagalurCrime NewsHomeLatest Newsnamma chikmagalur

ಚಾರ್ಮಾಡಿ ಘಾಟಿಯಲ್ಲಿ ಎರಡು ವಾಹನಗಳು ಪಲ್ಟಿ

Share
Share

ಮೂಡಿಗೆರೆ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಅಶೋಕ್ ಲೈಲ್ಯಾಂಡ್ ದೋಸ್ತ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮವಾಗಿ ವಾಹನದಲ್ಲಿದ್ದವರು ಗಾಯಗೊಂಡಿದ್ದಾರೆ.

ಘಟನೆ ನಡೆದ ಕೂಡಲೇ ಗಾಯಾಳುಗಳನ್ನು ಸಮೀಪದ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇಂದು ಮಧ್ಯಾಹ್ನವಷ್ಟೇ ಮದುವೆ ಮುಗಿಸಿ ವಾಪಸ್ ಆಗುತ್ತಿದ್ದ ಖಾಸಗಿ ಬಸ್ ಘಾಟಿಯ ನಾಲ್ಕನೇ ತಿರುವಿನಲ್ಲಿ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದರು ಇದರ ನಡುವೆ ಮತ್ತೊಂದು ವಾಹನ ಪಲ್ಟಿಯಾಗಿರುವುದು ಘಾಟ್ ರಸ್ತೆಯಲ್ಲಿ ಎಚ್ಚರಿಕೆಯ ಚಾಲನೆ ಅಗತ್ಯವಾಗಿದೆ.

ಖಾಸಗಿ ಬಸ್ಸೆಂದು ಪಲ್ಟಿ:  ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೆಂದು ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಮದುವೆ ಸಮಾರಂಭ ಮುಗಿಸಿ ಧರ್ಮಸ್ಥಳದಿಂದ ತುಮಕೂರು ಜಿಲ್ಲೆಯ ಪಾವಗಡಕ್ಕೆ ವಾಪಸ್ಸು ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ.

ಘಟನೆ ನಡೆದ ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿದ್ದು, ಆಂಬುಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡವರನ್ನು ಕಕ್ಕಿಂಜೆಯ ಕೃಷ್ಣ ಆಸ್ಪತ್ರೆ ಹಾಗೂ ಬೆಳ್ತಂಗಡಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಣಕಲ್ ಮತ್ತು ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಾರ್ಮಾಡಿ ಘಾಟ್‌ನ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ.

Two vehicles overturned at Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಬಸವಣ್ಣ ಸಮಾನತೆ ದಾರಿ ತೋರಿದ ಮಹಾನ್ ಮಾನವತಾವಾದಿ

ಚಿಕ್ಕಮಗಳೂರು: ಬಸವಣ್ಣನವರು ಕೇವಲ ಒಂದು ಧರ್ಮ ಅಥವಾ ಜಾತಿಗೆ ಸೀಮಿತರಾದವರಲ್ಲ, ಅವರು ಇಡೀ ಮಾನವಕುಲಕ್ಕೆ ಸಮಾನತೆಯ ದಾರಿ ತೋರಿದ ಮಹಾನ್ ಮಾನವತಾವಾದಿ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ಕುವೆಂಪು ಕಲಾಮಂದಿರದಲ್ಲಿ...

ಸಾಕು ನಾಯಿ ದಾಳಿಯಿಂದ ಏಳು ವರ್ಷದ ಮಗುವಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕೆ. ಕೆಳಗೂರು ಗ್ರಾಮದ ಕಾಫಿ ಎಸ್ಟೇಟ್ ಒಂದರಲ್ಲಿ ಸಾಕು ನಾಯಿಯೊಂದು ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿದ್ದು, ಏಳು ವರ್ಷದ ಮಗು ಸಾವು ಬದುಕಿನ ನಡುವೆ...

Related Articles

ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಿಲ್ಲ

ಚಿಕ್ಕಮಗಳೂರು: ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಿಲ್ಲ, ಎಸ್‌ಸಿಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿರುವುದು...

ಜಿಲ್ಲಾ ಜಾನಪದ ಸಮ್ಮೇಳನದಲ್ಲಿ ಜಾನಪದ ಲೋಕ ಅನಾವರಣ

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿ?ತ್ತಿನಿಂದ ನಗರದ ಕುವೆಂಪು ಕಲಾಮಂ ದಿರದಲ್ಲಿ ಭಾನುವಾರ ನಡೆದ ೬ ನೇ...

ಮೊಬೈಲ್ ಸಂದೇಶ ಕಳುಹಿಸುವ ವಿಚಾರ – ಎರಡು ಕುಟುಂಬಗಳ ನಡುವೆ ಭೀಕರ ಮಾರಾಮಾರಿ

ಕಡೂರು: ಸಕ್ಕರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕುನ್ನಾಳು ಗ್ರಾಮದಲ್ಲಿ ಮೊಬೈಲ್ ಸಂದೇಶ ಕಳುಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ...

ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ ಶಾಸಕಿ ನಯನಾ ಮೋಟಮ್ಮ

ಮೂಡಿಗೆರೆ: ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು...