Home namma chikmagalur chikamagalur ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2
chikamagalurHomeLatest Newsnamma chikmagalur

ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2

Share
Share

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 2 ಇದೇ ಏ.30 ರಿಂದ ಆರಂಭಗೊಳ್ಳುತ್ತಿರುವುದರಿಂದ ಪರೀಕ್ಷಾ ತಯಾರಿ ಕುರಿತು ಅಪರ ಜಿಲ್ಲಾಧಿಕಾರಿ ನಂಜುಡೇಗೌಡ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಏ.30 ರಿಂದ ಮೇ 13 ರ ವರೆಗೆ ಪರೀಕ್ಷೆ 2 ನಡೆಸುವುದಕ್ಕೆ ಪಿಯುಸಿ ಪರೀಕ್ಷಾ ಮಂಡಳಿ ವೇಳಾ ಪಟ್ಟಿ ಸಿದ್ದಪಡಿಸಿದೆ. ಅದರಂತೆ ಪರೀಕ್ಷೆಗೆ ಬೇಕಾದ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಸಿಸಿ ಟಿವಿ ಕ್ಯಾಮರಾ ಅಳವಡಿಕೆ, ವೆಬ್‌ ಕಾಸ್ಟಿಂಗ್‌ ಹಾಗೂ ಪರೀಕ್ಷಾ ಪ್ರಶ್ನ ಪತ್ರಿಕೆಗೆ ಪೂರೈಕೆ ಸೇರಿದಂತೆ ಎಲ್ಲವನ್ನೂ ನಿಯಮಾನುಸಾರ ತಯಾರಿ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ 7 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ 2 ನಡೆಯಲಿದ್ದು, ಈ ಪೈಕಿ ಎನ್‌ಆರ್‌ಪುರ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು, ಮೂಡಿಗರೆ, ತರೀಕೆರೆ ಹಾಗೂ ಕಡೂರು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 1744 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.

ಈ ಪೈಕಿ 844 ವಿದ್ಯಾರ್ಥಿಗಳು ಕಳೆದ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು. ಏ.9 ರಂದು ಪ್ರಕಟವಾದ ಫಲಿತಾಂಶದಲ್ಲಿ ಅಂಕ ಕಡಿಮೆ ಬಂದಿದೆ ಎಂಬ ಕಾರಣಕ್ಕೆ ಮರು ಪರೀಕ್ಷೆ ತೆಗೆದುಕೊಂಡ 658 ವಿದ್ಯಾರ್ಥಿಗಳು, ಕಳೆದ ವರ್ಷ ಅನುತ್ತೀರ್ಣರಾದ 227 ಹಾಘೂ ಖಾಸಗಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದುಕೊಂಡ 8 ವಿದ್ಯಾರ್ಥಿಗಳಿದ್ದಾರೆ

Second PUC exam 2 from 30th

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...