Home namma chikmagalur chikamagalur ಮಾಜಿ ಸರ್ಜನ್ ಡಾ. ಚಂದ್ರಶೇಖರ್ ವಿರುದ್ಧ ಎಫ್.ಐ.ಆರ್
chikamagalurHomenamma chikmagalur

ಮಾಜಿ ಸರ್ಜನ್ ಡಾ. ಚಂದ್ರಶೇಖರ್ ವಿರುದ್ಧ ಎಫ್.ಐ.ಆರ್

Share
Share

ಚಿಕ್ಕಮಗಳೂರು: ಸರ್ಕಾರಿ ಟೆಂಡರ್ ಕೊಡಿಸುವುದಾಗಿ ನಂಬಿಸಿ ₹41 ಲಕ್ಷ ವಂಚಿಸಿದ ಆರೋಪದ ಮೇಲೆ ಬಂಧಿತನಾಗಿರುವ ನಕಲಿ ಐಎಎಸ್ ಅಧಿಕಾರಿ ಮಿಥುನ್ ಮತ್ತು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಮಾಜಿ ಸರ್ಜನ್ ಡಾ. ಚಂದ್ರಶೇಖರ್ ವಿರುದ್ಧ ಈಗ ಮತ್ತೊಂದು ಗಂಭೀರ ದೂರು ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಮುಖ್ಯ ದಂತ ಆರೋಗ್ಯಾಧಿಕಾರಿ ಡಾ. ಪ್ರೇಮಕುಮಾರ್ ಅವರಿಗೆ ಈ ಜೋಡಿ ಲಕ್ಷಾಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಜಿಲ್ಲಾ ಸರ್ಜನ್ ಆಗಿದ್ದ ಡಾ. ಚಂದ್ರಶೇಖರ್ ಅವರು ಮಿಥುನ್ ಎಂಬಾತನನ್ನು 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಎಂದು ಪರಿಚಯಿಸಿ, ಆತನ ತರಬೇತಿ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹಣದ ನೆರವು ನೀಡುವಂತೆ ಪ್ರೇಮಕುಮಾರ್ ಅವರ ಮೇಲೆ ಒತ್ತಡ ಹೇರಿದ್ದರು.

ತಮ್ಮ ಮೇಲಧಿಕಾರಿಯ ಮಾತನ್ನು ನಂಬಿದ ಡಾ. ಪ್ರೇಮಕುಮಾರ್ ಅವರು ಮಿಥುನ್‌ನ ಐಎಎಸ್ ತರಬೇತಿ ವೆಚ್ಚ, ಅನಾರೋಗ್ಯದ ಚಿಕಿತ್ಸೆ ಹಾಗೂ ಆತನ ಸಂಬಂಧಿಕರ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಹಂತ ಹಂತವಾಗಿ ಸುಮಾರು ₹8,02,000 ಹಣವನ್ನು ನೀಡಿದ್ದರು.

ಅಷ್ಟೇ ಅಲ್ಲದೆ ಆಸ್ಪತ್ರೆಯಲ್ಲಿ ನಡೆದ ‘ದಂತ ಭಾಗ್ಯ’ ಶಿಬಿರದ ವೆಚ್ಚವನ್ನೂ ಕೂಡ ದಾನಿಗಳಿಂದ ಹಣ ಬರುತ್ತದೆ ಎಂಬ ಸುಳ್ಳು ಭರವಸೆಯೊಂದಿಗೆ ಪ್ರೇಮಕುಮಾರ್ ಅವರ ಕೈಯಿಂದಲೇ ಪಾವತಿಸುವಂತೆ ಮಾಡಿ ವಂಚಿಸಲಾಗಿತ್ತು.

ಮಿಥುನ್ ಐಎಎಸ್ ಅಧಿಕಾರಿಯೇ ಅಲ್ಲ ಎಂಬ ಸತ್ಯ ತಿಳಿದಿದ್ದರೂ ಡಾ. ಚಂದ್ರಶೇಖರ್ ಅವರು ಆತನೊಂದಿಗೆ ಶಾಮೀಲಾಗಿ ಈ ಸಂಚು ರೂಪಿಸಿರುವುದು ಈಗ ದೃಢಪಟ್ಟಿದೆ.‌

FIR against former surgeon Dr. Chandrashekhar

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...