Home namma chikmagalur chikamagalur ಕುಡಿಯುವ ನೀರಿನ ಸಮಸ್ಯೆ: ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ೩೦ ಲಕ್ಷ ರೂ.ಬಿಡುಗಡೆ
chikamagalurHomeLatest Newsnamma chikmagalur

ಕುಡಿಯುವ ನೀರಿನ ಸಮಸ್ಯೆ: ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ೩೦ ಲಕ್ಷ ರೂ.ಬಿಡುಗಡೆ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರವು ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ೩೦ ಲಕ್ಷ ರೂ. ಬಿಡುಗಡೆ ಮಾಡಿದ್ದು, ನೀರಿನ ಅಭಾವ ತಲೆದೋರದಂತೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಕಂಡು ಬಂದಲ್ಲಿ ಕೂಡಲೇ ಪರಿಹಾರ ಕಂಡುಕೊಳ್ಳಬೇಕು. ಕುಡಿಯುವ ನೀರಿಗೆ ಹಣದ ಕೊರತೆ ಇರುವುದಿಲ್ಲ. ಆಯಾ ತಹಸೀಲ್ದಾರರು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು  ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸ್ಥಳೀಯ ಶಾಸಕರನ್ನು ಒಳಗೊಂಡಂತೆ ಸಭೆಗಳನ್ನು ನಡೆಸಿ ಸಮಸ್ಯೆಗಳಿರುವ ಗ್ರಾಮಗಳನ್ನು ಗುರುತಿಸಿ ತಕ್ಷಣ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆ, ಟಾಸ್ಕ್ ಫೋರ್ಸ್ ಸಮಿತಿ ಹಾಗೂ ವಿವಿಧ ಯೋಜನೆಗಳಡಿ ನಡೆಯುತ್ತಿರುವ ಕಾಮಗಾರಿಗಳಿಗೆ ವಿಳಂಬವಿಲ್ಲದೆ ವಿದ್ಯುತ್ ಸಂಪರ್ಕಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜೆಜೆಎಂ ಯೋಜನೆಯಡಿ ಬಾಕಿ ಇರುವ ೭೨೩ ಕಾಮಗಾರಿಗಳನ್ನು ನಿಗದಿತ ವೇಳೆಯಲ್ಲಿ ನಿರ್ವಹಿಸಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಕುಡಿಯುವ ನೀರಿನ ಯೋಜನೆಗಳನ್ನು ಸಮರ್ಪಕಗೊಳಿಸಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಸಮಸ್ಯೆಗಳು ತಲೆದೋರದಂತೆ ಯೋಜನೆ ರೂಪಿಸಿಕೊಳ್ಳಬೇಕು. ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂಡು ಬರುವ ನೀರಿನ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ಸಮಸ್ಯೆಯ ಕಾರಣಕ್ಕೆ ನೀರಿನ ಸಮಸ್ಯೆ ತಲೆದೋರಬಾರದು. ಈ ಬಗ್ಗೆ ಅಧಿಕಾರಿಗಳು ನಿಗಾ ವಹಿಸಿ ಕಾರ್ಯ ನಿರ್ವಹಿಸುವಂತೆ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಹಾಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.  ಸಾರ್ವಜನಿಕರ ದೂರಿಗೆ ತಕ್ಷಣವೇ ಸ್ಪಂದಿಸಬೇಕು. ಅಧಿಕಾರಿಗಳು ನೀರಿನ ಸಮಸ್ಯೆಗಳಿರುವ ಗ್ರಾಮಗಳಿಗೆ ತಕ್ಷಣ ಭೇಟಿ ನೀಡುವಂತೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ,  ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Drinking water problem: Rs. 30 lakh released for each assembly constituency

Share

Leave a comment

Leave a Reply

Your email address will not be published. Required fields are marked *

Don't Miss

ಏ. 26ಕ್ಕೆ ಜಿಲ್ಲಾ ಮಟ್ಟದ 6ನೇ ಜಾನಪದ ಸಮ್ಮೇಳನ

ಚಿಕ್ಕಮಗಳೂರು: ಪಾಶ್ಚಾತ್ಯ ಸಂಸ್ಕೃತಿ ಸಂಗೀತದ ಹಾವಳಿಯಿಂದಾಗಿ ನಶಿಸುತ್ತಿರುವ ಅತ್ಯಮೂಲ್ಯ ಜನಪದ ಕಲೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಉದ್ದೇಶದೊಂದಿಗೆ ಏ. ೨೬ ರಂದು ಭಾನುವಾರ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾ ಮಟ್ಟದ...

ಸರ್ಫೇಸಿ ಕಾಯಿದೆಯ ವಿರುದ್ದ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಕಾಫಿ ಬೆಳೆಗಾರರ ಪಾಲಿಗೆ ಮರಣ ಶಾಸನವಾಗಿರುವ ಸರ್ಫೇಸಿ ಕಾಯಿದೆ ರದ್ದು ಗೊಳಿಸಲು ರಾಜ್ಯ ಸರ್ಕಾರ ಮದ್ಯ ಪ್ರವೇಶ ಮಾಡಿ ಕಾಯಿದೆ ರದ್ದುಗೊಳಿಸಲು ಪ್ರಮಾಣ ಪತ್ರ ಸಲ್ಲಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ಕೆನರಾ...

Related Articles

ಬೀರೂರು ಠಾಣಾಧಿಕಾರಿ ತಿಪ್ಪೇಶ್ ಪತ್ನಿ ಪದ್ಮಾ ನೇಣಿಗೆ ಶರಣು

ಬೀರೂರು: ಇಲ್ಲಿನ ಠಾಣಾಧಿಕಾರಿ ತಿಪ್ಪೇಶ್ ರವರ ಪತ್ನಿ ಪದ್ಮಾ(34) ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದು ಕೊಂಡು...

ಬೀರೂರು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

ಬೀರೂರು: ಬೀರೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಪ್ಪೇಶ್ ಅವರ ಪತ್ನಿ ಪದ್ಮ (35) ಅವರು ರಾತ್ರಿ...

ಕಳ್ಳರ ತಂಡ ಬಂಧನ-32.74 ಲಕ್ಷ ರೂಪಾಯಿ ಮೌಲ್ಯದ ಸ್ವತ್ತು ವಶ

ತರೀಕೆರೆ: ಸರಣಿ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ತರೀಕೆರೆ ಉಪ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಅಂತರಜಿಲ್ಲಾ...

ಕಾಡು ಹಂದಿ ದಾಳಿಗೆ ಮಹಿಳೆ ಗಂಭೀರ ಗಾಯ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಕಾಡಾನೆ ಮತ್ತು ಕಾಡೆಮ್ಮೆಗಳ...