ಬೀರೂರು: ಬೀರೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಪ್ಪೇಶ್ ಅವರ ಪತ್ನಿ ಪದ್ಮ (35) ಅವರು ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತರು ಬೀರೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಪ್ಪೇಶ್ ಅವರ ಪತ್ನಿಯಾಗಿದ್ದು, ಘಟನೆ ರಾತ್ರಿ ವೇಳೆ ಮನೆಯಲ್ಲೇ ನಡೆದಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Birur Sub-Inspector’s wife hangs herself
Leave a comment