Home namma chikmagalur chikamagalur ಮೇ.14ಕ್ಕೆ ಸರಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
chikamagalurHomeLatest Newsnamma chikmagalur

ಮೇ.14ಕ್ಕೆ ಸರಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

Share
Share

ಮೂಡಿಗೆರೆ: ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿ ಹಾಗೂ ಸರಳ ಸಾಮೂಹಿಕ ವಿವಾಹ ಸಮಿತಿ ವತಿಯಿಂದ ಮೇ.೧೪ ಬೆಳಗ್ಗೆ ೧೦ ಗಂಟೆಗೆ ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ ೧೦ ಜೋಡಿಗಳ ಸರಳ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ ಎಂದು ಮಾಜಿ ಸಚಿವೆ ಹಾಗೂ ಸಮಿತಿ ಅಧ್ಯಕ್ಷೆ ಮೋಟಮ್ಮ ಹೇಳಿದರು.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂಬೇಡ್ಕರ್ ಜಯಂತಿ ಕೇವಲ ಘೋಷಣೆ ಮತ್ತು ಭಾಷಣಗಳಿಗೆ ಸೀಮಿತವಾಗಬಾರದು. ಈ ದೃಷ್ಟಿಯಿಂದ ಅಂಬೇಡ್ಕರ್ ಅವರ ಆಶಯವನ್ನು ಪೂರೈಸುವ ಸಲುವಾಗಿ ಎಲ್ಲಾ ಸಮುದಾಯದ ಬಡ ಕುಟುಂಬಕ್ಕೆ ಅನುಕೂವಾಗಲು ಸರಳ ಸಾಮೂಹಿಕ ವಿವಾಹ ರೂಪಿಸಲಾಗಿದೆ ಎಂದರು.

ಅರ್ಜಿ ಸಲ್ಲಿಸುವ ವದುವರರು ತಾಲೂಕು ಕಚೇರಿ ಹಿಂಭಾಗದಲ್ಲಿರುವ ಉದ್ಯೋಗಸ್ತ ಮಹಿಳಾ ವಸತಿ ನಿಲಯದಲ್ಲಿ ಅರ್ಜಿ ಪಡೆದು, ಮೇ.೫ರೊಳಗೆ ಅರ್ಜಿ ಸಲ್ಲಿಸಬೇಕು. ಜತೆಗೆ ತಮ್ಮ ವ್ಯಾಪ್ತಿಯ ಪಂಚಾಯಿತಿಯಿಂದ ಕಡ್ಡಾಯವಾಗಿ ಅವಿವಾಹಿತ ದೃಢೀಕರಣ ಪತ್ರ ನೀಡಬೇಕು. ವಿವಾಹ ೧೦ ಜೋಡಿಗೆ ಸೀಮಿತ ಮಾಡಿರುವುದರಿಂದ ಮೊದಲು ಅರ್ಜಿ ಸಲ್ಲಿಸಿದ ಮದೂವರರು ಭಾಗವಹಿಸಲು ಅವಕಾಶವಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮಂಗಳೂರಿನ ವಿ.ವಿ.ಕಾಲೇಜಿನ ಅಸಿಸ್ಟೆಂಟ್ ಪ್ರೋಪೇಸರ್ ಸಭಿತಾ ಗುಣ್ಮಿ, ಚಲನಚಿತ್ರ ನಟ ಚೇತನ್, ಗೌರಿಗದ್ದೆ ಆಶ್ರಮದ ಅವದೂತ ವಿನಯ್ ಗುರೂಜಿ ಆಗಮಿಸಲಿದ್ದಾರೆ. ಅಲ್ಲದೇ ಸೋಬಾನೆ, ಕೋಲಾಟ, ಜಾನಪದ ನೃತ್ಯ ಸೇರಿದಂತೆ ಮಲೆನಾಡಿನ ಸಂಸಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವದೂವರರಿಗೆ ಆಶೀರ್ವಾಧಿಸುವ ಮೂಲಕ ಅಂಬೇಡ್ಕರ್ ಆಶಯಕ್ಕೆ ಬಂಬಲ ನೀಡಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಪ.ಪಂ. ಮಾಜಿ ಉಪಾಧ್ಯಕ್ಷ ರಮೇಶ್ ಹೊಸ್ಕೆರೆ, ಸಮಿತಿ ನಿರ್ದೇಶಕಿ ಸೀತಮ್ಮ, ಕಲಾವಿದ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

Applications invited for simple mass marriage on May 14th

 

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...