ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
ಎತ್ತರದ ಪ್ರದೇಶದಲ್ಲಿ ನಿಂತಿದ್ದ ಕಾಡಾನೆ ರಸ್ತೆ ಕಡೆ ಇಳಿಯಲು ಜಾಗ ಹುಡುಕುತ್ತಿದ್ದು, ಕೆಳಗಿಳಿಯಲು ಹೆದರಿ ಕೆಲಕಾಲ ಅಲ್ಲೇ ನಿಂತಿತ್ತು. ಬೀಳುವ ಭೀತಿಯಿಂದ ಸುರಕ್ಷಿತ ದಾರಿ ಹುಡುಕುತ್ತಿದ್ದ ಸಲಗವನ್ನು ಕಂಡು ವಾಹನ ಸವಾರರು ಭಯಗೊಂಡು ತಮ್ಮ ವಾಹನಗಳನ್ನು ನಿಲ್ಲಿಸಿದರು.
ಘಟನಾ ಸ್ಥಳದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಅರಣ್ಯ ಇಲಾಖೆ ಅಥವಾ ಸಂಬಂಧಪಟ್ಟವರಿಗೆ ಮಾಹಿತಿ ನೀಡಲು ಪ್ರವಾಸಿಗರು ಪರದಾಡಿದರು.
ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ.
ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಹೆಚ್ಚು ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
A lonely man at the 3rd turn of Charmadi Ghat
Leave a comment