Home namma chikmagalur chikamagalur ಕೆಸವಿನಮನೆ ಗ್ರಾಮದಲ್ಲಿ ಅಕ್ರಮ ಗೊಬ್ಬರ ದಾಸ್ತಾನು ಪತ್ತೆ
chikamagalurCrime NewsHomeLatest Newsnamma chikmagalur

ಕೆಸವಿನಮನೆ ಗ್ರಾಮದಲ್ಲಿ ಅಕ್ರಮ ಗೊಬ್ಬರ ದಾಸ್ತಾನು ಪತ್ತೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ರೈತರು ಸಕಾಲಕ್ಕೆ ಯೂರಿಯಾ ಗೊಬ್ಬರ ಸಿಗದೆ ಸಂಕಷ್ಟ ಎದುರಿಸುತ್ತಿರುವ ಬೆನ್ನಲ್ಲೇ, ಮಧ್ಯವರ್ತಿಗಳು ಅಕ್ರಮವಾಗಿ ಗೊಬ್ಬರ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು ಅಕ್ರಮ ದಂಧೆಕೋರರಿಗೆ ಕೃಷಿ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಜಿಲ್ಲೆಯ ಕೆಸವಿನಮನೆ ಗ್ರಾಮದಲ್ಲಿರುವ ಕೋಳಿ ಫಾರ್ಮ್ ಮೇಲೆ ಕೃಷಿ ಇಲಾಖೆ ಅಧಿಕಾರಿ ತಿರುಮಲೇಶ್ ಅವರ ನೇತೃತ್ವದಲ್ಲಿ ಮಿಂಚಿನ ದಾಳಿ ನಡೆಸಲಾಗಿದ್ದು, ಈ ವೇಳೆ ಕೃಷಿ ಬಳಕೆಯ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ.

ದಾಳಿಯ ಸಂದರ್ಭದಲ್ಲಿ ಸುಮಾರು 181 ಚೀಲ ಮೂಲ ಯೂರಿಯಾ ಹಾಗೂ ಕೈಗಾರಿಕಾ ಉದ್ದೇಶಕ್ಕಾಗಿ ರೀಪ್ಯಾಕಿಂಗ್ ಮಾಡಲಾಗಿದ್ದ 218 ಚೀಲಗಳು ಸೇರಿದಂತೆ ಒಟ್ಟು 399 ಯೂರಿಯಾ ಚೀಲಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕೋಳಿ ಫಾರ್ಮ್ ಮಾಲೀಕ ರಾಜೇಶ್ ಎಂಬಾತ ಕೃಷಿ ಬಳಕೆಯ ಯೂರಿಯಾವನ್ನು ಲಾಭದ ಉದ್ದೇಶಕ್ಕಾಗಿ ಅಕ್ರಮವಾಗಿ ದಾಸ್ತಾನು ಮಾಡಿ ರೀಪ್ಯಾಕಿಂಗ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆರೋಪಿ ರಾಜೇಶ್ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃಷಿ ಇಲಾಖೆ ಅಧಿಕಾರಿಗಳು ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

Illegal fertilizer stockpile discovered in Kesavinamane village

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...