Home 40 ವರ್ಷಗಳ ಒಳ ಮೀಸಲಾತಿ ಹೋರಾಟ ಫಲ ಕೊಟ್ಟಿದೆ
HomeLatest Newsnamma chikmagalurTarikere

40 ವರ್ಷಗಳ ಒಳ ಮೀಸಲಾತಿ ಹೋರಾಟ ಫಲ ಕೊಟ್ಟಿದೆ

Share
Share

ತರೀಕೆರೆ:  ಕಳೆದ 40 ವರ್ಷಗಳಿಂದ ಒಳ ಮೀಸಲಾತಿ ಜಾರಿಗೊಳಿಸುವಂತೆ ಮಾಡಿದ ಹೋರಾಟ ಫಲ ಕೊಟ್ಟಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು. ತರೀಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಮಾದಿಗ ಸಮುದಾಯದ ಮುಖಂಡರ ಸಂವಾದದಲ್ಲಿ ಮಾತನಾಡಿ ಒಳ ಮೀಸಲಾತಿ ಒದಗಿಸಲು ನೇಮಿಸಿದ ಎಲ್ಲಾ ಆಯೋಗಗಳು ಮಾದಿಗ ಸಮುದಾಯದ ಪರವಾದ ಮತ್ತು ಸತ್ಯವಾದ ವರದಿಯನ್ನೇ ರಾಜ್ಯ ಸರ್ಕಾರಕ್ಕೆ ನೀಡಿವೆ.

ಡಾ.ಬಿ.ಆರ್.ಅಂಬೇಡ್ಕರ್ ರವರ ಆಶಯದಂತೆಯೇ ಮೀಸಲಾತಿ ದೊರಕಿದೆ. ಮುಂದಿನ ಎಲ್ಲಾ ಸರ್ಕಾರಿ ನೌಕರಿಗಳು ಒಳ ಮೀಸಲಾತಿಯಡಿಯಲ್ಲಿಯೇ ಭರ್ತಿಯಾಗಲಿವೆ. ಒಳ ಮೀಸಲಾತಿಯಲ್ಲಿ ಜನಸಂಖ್ಯೆ ಮತ್ತು ಅವರ ಸ್ಥಿತಿಗತಿಗಳ ಆಧಾರದ ಮೇಲೆ ಮೀಸಲಾತಿಯ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಒಳ ಮೀಸಲಾತಿ ಸೌಲಭ್ಯದಡಿ ಸಮುದಾಯದ ವಿದ್ಯಾವಂತರಿಗೆ ಸೂಕ್ತ ಅವಕಾಶ ದೊರಕಲಿವೆ.

ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಜಿಲ್ಲಾವಾರು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಎಂಬ ಉದ್ದೇಶದೊಂದಿಗೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಭೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಜಿ.ತಿಪ್ಪೇಶ್, ಮಹೇಂದ್ರಸ್ವಾಮಿ, ಶಿಕ್ಷಕ ಎಚ್.ಕೆ.ಶೇಖರಪ್ಪ ಮಾತನಾಡಿದರು. ಅಣ್ಣಯ್ಯ, ಪ್ರಮೋದ್, ವೈ.ಎಸ್.ಮಂಜಪ್ಪ, ಜಿ.ಟಿ.ರಮೇಶ್, ಬಸವರಾಜು, ಮಂಜಪ್ಪ, ನಾಗೇಶ್, ರಂಗನಾಥ್, ಹರೀಶ್, ಮಂಜಪ್ಪ, ಅಶೋಕ್, ಆಂಜನೇಯ, ಎಸ್.ಕೆ.ರಂಗಪ್ಪ, ಕುಮಾರಪ್ಪ, ರಘು, ಶಿವರಾಜ್, ಗುರುಮೂರ್ತಿ ಹಾಗೂ ಇತರರು ಹಾಜರಿದ್ದರು.
40 years of internal reservation struggle has borne fruit
Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...